ಕರ್ನಾಟಕ ರಾಜ್ಯ ಸರ್ಕಾರದಿಂದ 22,000 ಅತಿಥಿ ಶಿಕ್ಷಕರ ಭರ್ಜರಿ ಹುದ್ದೆಗಳ ನೇಮಕಾತಿ
Published by: Savita Halli | Date:4 ಮೇ 2022
ಕರ್ನಾಟಕ ರಾಜ್ಯ ಸರ್ಕಾರವು 2022 - 23ನೇ ಸಾಲಿನಲ್ಲಿ ರಾಜ್ಯದ ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ 22,000 ಅತಿಥಿ ಶಿಕ್ಷಕರನ್ನು ನೇರ ನೇಮಕ ಮಾಡಿಕೊಳ್ಳಲು ರಾಜ್ಯ ಸರ್ಕಾರ ಆದೇಶ ಹೊರಡಿಸಿ ಅನುಮತಿ ನೀಡಿದೆ.
ನೇರ ನೇಮಕದ ಮೂಲಕ ಹುದ್ದೆ ಭರ್ತಿ ಮಾಡುವವರೆಗೂ ಪ್ರಸಕ್ತ ಶೈಕ್ಷಣಿಕ ಸಾಲಿನ ಅಂತ್ಯದವರೆಗೆ ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿನ ಖಾಲಿ ಹುದ್ದೆಗಳಿಗೆ ಎದುರಾಗಿ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ರಾಜ್ಯ ಸರ್ಕಾರವೇ ಆದೇಶ ಹೊರಡಿಸಿ ಅನುಮತಿಯನ್ನು ನೀಡಲಾಗಿದೆ.
ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಜಿಲ್ಲಾವಾರು ಹುದ್ದೆಗಳನ್ನು ವಿವಿಧ ರೀತಿಯಲ್ಲಿ ಹಂಚಿಕೆ ಮಾಡಿದೆ.
- ಈ ನೇಮಕಾತಿಯ ಸವಿವರವಾದ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಇಲಾಖಾ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
No. of posts: 22000
Comments