ಕರ್ನಾಟಕ ಉಚ್ಚ ನ್ಯಾಯಲಯದಲ್ಲಿ ಖಾಲಿ ಇರುವ ಒಟ್ಟು 21 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕರ್ನಾಟಕ ಉಚ್ಚ ನ್ಯಾಯಲಯದಲ್ಲಿ ಖಾಲಿ ಇರುವ ಒಟ್ಟು 21 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Mallappa Myageri
10 ನವೆಂಬರ್ 2021 Others State Important
ಕರ್ನಾಟಕ ಉಚ್ಚ ನ್ಯಾಯಲಯದಲ್ಲಿ ಖಾಲಿ ಇರುವ ಒಟ್ಟು 21 ಜಿಲ್ಲಾ ನ್ಯಾಯಾಧೀಶ ಹುದ್ದೆಗಳನ್ನು ನೇಮಕಾತಿ ಮಾಡಿಕೋಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನಿಗದಿಪಡಿಸಿದ ಕೊನೆಯ ದಿನಾಂಕ : 09-12-2021ರ ರಾತ್ರಿ 11:59ರೊಳಗೆ ಅರ್ಜಿಯನ್ನು ಸಲ್ಲಿಸಲು ಸೂಚಿಸಿದೆ.
Job Overview
No. of posts
21
Start Date
10 ನವೆಂಬರ್ 2021
End Date
9 ಡಿಸೆಂಬರ್ 2021
Last Payment
14 ಡಿಸೆಂಬರ್ 2021
Employment Type
FULL_TIME
Organization
KPSC Vaani (Website)
Location
Karnataka, KA,
Selection Procedure:
ಜಿಲ್ಲಾ ನ್ಯಾಯಾಧೀಶ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಜಿಲ್ಲಾ ನ್ಯಾಯಾಧೀಶ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಾನೂನು ಪದವಿಯನ್ನು ಪಡೆದಿರಬೇಕು.
Fee:

ಜಿಲ್ಲಾ ನ್ಯಾಯಾಧೀಶ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. 
ಪ್ರಿಲಿಮಿನರಿ ಪರೀಕ್ಷೆಗೆ : ಸಾಮಾನ್ಯ ಅಭ್ಯರ್ಥಿಗಳು ರೂ500/- ಮತ್ತು ಪ.ಜಾ/ಪ.ಪಂಗಡ/ಪ್ರವರ್ಗ-1ರ ಅಭ್ಯರ್ಥಿಗಳು ರೂ250/- 
ಪ್ರಮುಖ ಪರೀಕ್ಷೆಗೆ : ಸಾಮಾನ್ಯ ಅಭ್ಯರ್ಥಿಗಳು ರೂ1000/- ಮತ್ತು ಪ.ಜಾ/ಪ.ಪಂಗಡ/ಪ್ರವರ್ಗ-1ರ ಅಭ್ಯರ್ಥಿಗಳು ರೂ750/- ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಅಥವಾ ಚಲನ್ ಮೂಲಕ ದಿನಾಂಕ : 14-12-2021 ರ ರಾತ್ರಿ 11:59ರೊಳಗೆ ಪಾವತಿಸಲು ಸೂಚಿಸಿದೆ.

Age Limit:

ಜಿಲ್ಲಾ ನ್ಯಾಯಾಧೀಶ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ವಯೋಮಿತಿಯನ್ನು ನಿಗದಿಗೊಳಿಸಿದೆ.  
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಟ 45 ವರ್ಷ ವಯೋಮಿತಿಯನ್ನು
ಪ.ಜಾತಿ/ಪ.ಪಂಗಡದ ಅಭ್ಯರ್ಥಿಗಳಿಗೆ ಗರಿಷ್ಟ 48 ವರ್ಷ ವಯೋಮಿತಿಯನ್ನು ಮತ್ತು
ಮಾಜಿ ಸೈನಿಕ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

To Download the official notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.