ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಖಾಲಿ ಇರುವ 56 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ | ಕೂಡಲೇ ಅರ್ಜಿ ಸಲ್ಲಿಸಿ
ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಖಾಲಿ ಇರುವ 56 ಸಿವಿಲ್ ನ್ಯಾಯಾಧೀಶ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 23/05/2022ರ ಸಂಜೆ 5 ಗಂಟೆಯೊಳಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 22/04/2022
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23/05/2022
- ಶುಲ್ಕ ಪಾವತಿಸಲು ಕೊನೆಯ ದಿನಾಂಕ: 26/05/2022
- No. of posts
- 56
- Start Date
- 26 ಎಪ್ರಿಲ್ 2022
- End Date
- 23 ಮೇ 2022
- Last Payment
- 26 ಮೇ 2022
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ(ಲಿಖಿತ ಮತ್ತು ಮೌಖಿಕ)ಯಲ್ಲಿ ಪಡೆದ ಒಟ್ಟು ಅಂಕಗಳ ಆಧಾರದ ಮೇಲೆ ನೇರ ನೇಮಕಾತಿಯನ್ನು ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಭಾರತದಲ್ಲಿನ ಕಾನೂನಿನ ಮೂಲಕ ಸ್ಥಾಪಿತವಾದ ವಿಶ್ವವಿದ್ಯಾಲಯವು ನೀಡಿದ ಕಾನೂನು ಪದವಿಯನ್ನು ಹೊಂದಿರಬೇಕು ಮತ್ತು ಕಡ್ಡಾಯವಾಗಿ ವಕೀಲರಾಗಿ ನೊಂದಣಿ ಆಗಿರಬೇಕು.
Fee:
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಸಾಮಾನ್ಯ ಅಭ್ಯರ್ಥಿಯು ಮತ್ತು ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಯು 500/-ರೂ ಮತ್ತು
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳು 250/-ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Age Limit:
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು 38 ವರ್ಷ ವಯಸ್ಸು ಮತ್ತು ಇತರರ ಸಂದರ್ಭದಲ್ಲಿ 35 ವರ್ಷ ವಯಸ್ಸು ಮೀರಿರಬಾರದು.
* ಮಾಜಿ ಸೈನಿಕ ಅಭ್ಯರ್ಥಿಗಳಿಗಾಗಿ ಗರಿಷ್ಟ ವಯೋಮಿತಿಯಲ್ಲಿ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.