ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Yallamma G
14 ಮಾರ್ಚ್ 2023 Others
Tags: SSLC
ಕರ್ನಾಟಕ ಉಚ್ಚ ನ್ಯಾಯಾಲಯ ಬೆಂಗಳೂರು ಇಲ್ಲಿ ಉಳಿದ ಮೂಲ ವೃಂದದಲ್ಲಿ ಖಾಲಿ ಇರುವ 37 ವಾಹನ ಚಾಲಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 06/04/2023ರ ಸಂಜೆ 5 ಗಂಟೆಯೊಳಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
Job Overview
No. of posts
37
Start Date
14 ಮಾರ್ಚ್ 2023
End Date
6 ಎಪ್ರಿಲ್ 2023
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅಂಕಗಳ ಆಧಾರದ ಮೇಲೆ ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು S.S.L.C (10th) ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:

* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಸಾಮಾನ್ಯ ಅಭ್ಯರ್ಥಿಗಳು ಮತ್ತು ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು 500/-ರೂ ಮತ್ತು
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ದೈಹಿಕ ಅಂಗವಿಕಲತೆ ಹೊಂದಿರುವ ಅಭ್ಯರ್ಥಿಗಳು 250/-ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು 
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

To Download Official Notification
Related Tags: SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.