Loading..!

ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದಿಂದ ಸಾವಿರಾರು ಹುದ್ದೆಗಳ ನೇಮಕಾತಿಗಾಗಿ ಉದ್ಯೋಗ ಮೇಳ ಆಯೋಜನೆ | ಈಗಲೇ ನೋಂದಾಯಿಸಿ
Published by: Basavaraj Halli | Date:2 ಸೆಪ್ಟೆಂಬರ್ 2021
not found
ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮವು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಸ್ಕಿಲ್ ಸೆಂಟರ್ ನಲ್ಲಿ ಇದೇ ದಿನಾಂಕ 03 ಮತ್ತು 04 ಸೆಪ್ಟೆಂಬರ್ 2021 ರಂದು ಬೆಳಿಗ್ಗೆ 11:00 ಗಂಟೆಯಿಂದ ಸಾಯಂಕಾಲ 5:00 ಗಂಟೆಯವರೆಗೆ ಉದ್ಯೋಗ ಮೇಳ ಆಯೋಜಿಸಿದ್ದು, ಈ ಉದ್ಯೋಗಮೇಳದಲ್ಲಿ SBI, ಟೊಯೋಟಾ, HGS, ಆದಿತ್ಯ ಬಿರ್ಲಾ ಗ್ರೂಪ್  ಸೇರಿದಂತೆ ಹಲವಾರು ಕಂಪೆನಿಗಳು ಉದ್ಯೋಗಾಕಾಂಕ್ಷಿಗಳ ನೇಮಕಾತಿಗಾಗಿ ಭಾಗವಹಿಸಲಿದ್ದು, ಈ ಉದ್ಯೋಗ ಮೇಳದಲ್ಲಿ ಎಂಟನೇ ತರಗತಿ, ಹತ್ತನೇ ತರಗತಿ, ಪಿಯುಸಿ, ಐಟಿಐ, ಡಿಪ್ಲೊಮಾ, ಇಂಜಿನಿಯರಿಂಗ್, ಯಾವುದೇ ಪದವಿ ಹಾಗೂ ಸ್ನಾತಕೋತ್ತರ ಪದವೀಧರರು ಭಾಗವಹಿಸಿ ತಮ್ಮ ಕನಸಿನ ಹುದ್ದೆಗಳನ್ನು ಪಡೆಯಬಹುದಾಗಿದೆ.

* ಈ ಉದ್ಯೋಗ ಮೇಳದಲ್ಲಿ ಒಟ್ಟು ಎರಡು ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿ ನಡೆಯಲಿದ್ದು, ಆಕಾಂಕ್ಷಿಗಳು ಇದರ ಪ್ರಯೋಜನ ಪಡೆಯಬಹುದಾಗಿದೆ.

* ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಆನ್ ಲೈನ್ ನಲ್ಲಿ ನೋಂದಣಿ ಮಾಡಿಕೊಳ್ಳಬೇಕು.
No. of posts:  2000

Comments

Geeta Nandini ಸೆಪ್ಟೆ. 3, 2021, 11:29 ಅಪರಾಹ್ನ