Loading..!

ಕರ್ನಾಟಕ ಸರ್ಕಾರ ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದಲ್ಲಿ ನಿರ್ದೇಶಕರ ಹುದ್ದೆ ನೇಮಕಾತಿ ಅಧಿಸೂಚನೆ ಪ್ರಕಟ
Published by: Basavaraj Halli | Date:12 ಮಾರ್ಚ್ 2021
not found
ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯ (ಮಹಾತ್ಮಗಾಂಧಿ ನರೇಗಾ) ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಿರ್ದೇಶಕರ ಹುದ್ದೆ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ ಪ್ರಕಟಣೆ ಹೊರಡಿಸಲಾಗಿದೆ. 

ಈ ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ 2 ವರ್ಷಗಳ ಅವಧಿಗೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಹುದ್ದೆಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಂಡು ಅರ್ಜಿ ನಮೂನೆ, ವಯಸ್ಸು, ವಿದ್ಯಾರ್ಹತೆ, ಅನುಭವ, ಸಂಭಾವನೆ, ನಿಬಂಧನೆಗಳು ಸೇರಿ ಇತ್ಯಾದಿ ವಿವರಗಳನ್ನು ಪಡೆಯಬಹುದಾಗಿದೆ. 

 

ಆಸಕ್ತ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗೆ ನೀಡಿರುವ ವಿಳಾಸಕ್ಕೆ ದಿನಾಂಕ 12 ಏಪ್ರಿಲ್ 2021ರ ಸಂಜೆ 5:30 ರೊಳಗಾಗಿ ತಲುಪುವಂತೆ ಸಲ್ಲಿಸಬೇಕು. 

ಅರ್ಜಿ ಸಲ್ಲಿಸುವ ವಿಳಾಸ : 

ಆಯುಕ್ತರು ಗ್ರಾಮೀಣಾಭಿವೃದ್ಧಿ, 

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, 

ಮೂರನೇ ಹಂತ, ಎರಡನೇ ಮಹಡಿ, 

ಡಾ|| ಅಂಬೇಡ್ಕರ್ ವೀದಿ, ಬೆಂಗಳೂರು-01

Comments

Ahmed Moinuddin ಮಾರ್ಚ್ 12, 2021, 6:21 ಅಪರಾಹ್ನ
Rd Bhovi ಮಾರ್ಚ್ 18, 2021, 7:47 ಪೂರ್ವಾಹ್ನ
Rd Bhovi ಮಾರ್ಚ್ 18, 2021, 7:47 ಪೂರ್ವಾಹ್ನ