ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದಲ್ಲಿ ಖಾಲಿ ಇರುವ 28 ಸೀನಿಯರ್ ಪ್ರೋಗ್ರಾಮರ್, ಜೂನಿಯರ್ ಪ್ರೋಗ್ರಾಮರ್, ಜೂನಿಯರ್ ಕನ್ಸೋಲ್ ಆಪರೇಟರ್, ಮತ್ತು ಕಂಪ್ಯೂಟರ್ ಆಪರೇಟರ್ ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 28
ಸೀನಿಯರ್ ಪ್ರೋಗ್ರಾಮರ್ - 02
ಜೂನಿಯರ್ ಪ್ರೋಗ್ರಾಮರ್ - 02
ಜೂನಿಯರ್ ಕನ್ಸೋಲ್ ಆಪರೇಟರ್ - 04
ಕಂಪ್ಯೂಟರ್ ಆಪರೇಟರ್ -04
ಸಹಾಯಕರು - 03
ಕಿರಿಯ ಸಹಾಯಕರು - 08
ದತ್ತಾಂಶ ನಮೂದು ಸಹಾಯಕರು/ ಬೆರಳಚ್ಚುಗಾರರು - 05
- No. of posts
- 28
- Start Date
- 4 ಡಿಸೆಂಬರ್ 2024
- End Date
- 4 ಜನವರಿ 2025
- Last Payment
- 4 ಜನವರಿ 2025
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 04-12-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03-01-2025
ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 04-01-2025
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ಮತ್ತು ಯಾವುದೇ ಅಂಗೀಕೃತ ಸಂಸ್ಥೆ /ವಿಶ್ವವಿದ್ಯಾಲಯದಿಂದ PUC/ ಬಿ.ಎಸ್ಸಿ ವಿದ್ಯಾರ್ಹತೆಯನ್ನು ಪಡೆದಿರಬೇಕು. ಜೊತೆಗೆ ಗಣಕಯಂತ್ರ ಜ್ಞಾನ ಹೊಂದಿರತಕ್ಕದ್ದು.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು
• ಸಾಮಾನ್ಯ ಅರ್ಹತೆ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 750/-
• SC, ST, ಪ್ರವರ್ಗ1, ಮಾಜಿ ಸೈನಿಕ ಅಭ್ಯರ್ಥಿಗಳು – ರೂ. 500/-
• ವಿಕಲಚೇತನ ಅಭ್ಯರ್ಥಿಗಳು – ರೂ. 250/- ರೂ ಅರ್ಜಿ ಶುಲ್ಕ ನೀಡದಿಪಡಿಸಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ವರ್ಷ ಹೊಂದಿರಬೇಕು
* ಸಾಮಾನ್ಯ ಅಭ್ಯರ್ಥಿಗಳಿಗೆ : 37 ವರ್ಷ
* ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿ ಗರಿಷ್ಟ 39 ವರ್ಷ ಮತ್ತು
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1ರ ಗರಿಷ್ಟ 42 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.