ಕರ್ನಾಟಕದಲ್ಲಿ ಖಾಲಿ ಇರುವ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿ | PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Tags: PUC
Published by: Yallamma G
|
ಕರ್ನಾಟಕದಲ್ಲಿ ಖಾಲಿ ಇರುವ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿ | PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕರ್ನಾಟಕದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1000 ಗ್ರಾಮ ಆಡಳಿತ ಅಧಿಕಾರಿ (Village Administrative Officer) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಒಂದು ಜಿಲ್ಲೆಗೆ ಮಾತ್ರ ಅರ್ಜಿಯನ್ನು ಸಲ್ಲಿಸಲು ಅರ್ಹತೆಯನ್ನು ಪಡೆದಿರುತ್ತಾರೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 04/05/2024 ರಾತ್ರಿ 11:59ರೊಳಗೆ ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು : 
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 04/03/2024 ಬೆಳಿಗ್ಗೆ 11:00
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 04/05/2024 ರಾತ್ರಿ 11:59
- ಕರ್ನಾಟಕದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಆನ್ ಲೈನ್ ಮೂಲಕ ಮಾರ್ಚ್ 4ರಿಂದ ಅರ್ಜಿ ಸಲ್ಲಿಕೆಗೆ ಅವಕಾಶವನ್ನು ನೀಡಲಾಗಿತ್ತು, ಇದೀಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅರ್ಜಿ ಸಲ್ಲಿಸುವ ದಿನಾಂಕವನ್ನು  ತಾತ್ಕಾಲಿಕವಾಗಿ ಮುಂದೂಡಲಾಗಿದೆ.   

* - ಕರ್ನಾಟಕದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ದಿನಾಂಕ 04-05-2024 ರವರೆಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗಿತ್ತು, ಆದರೆ ಕೆಲವು ಅಭ್ಯರ್ಥಿಗಳು ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿ ಅರ್ಜಿ ಸಲ್ಲಿಕೆಯ ದಿನಾಂಕವನ್ನು ವಿಸ್ತರಿಸಲು ಕೋರಿದ್ದರಿಂದ ಅರ್ಜಿ ಸಲ್ಲಿಕೆಯ ದಿನಾಂಕವನ್ನು 15-05-2024 ರ ವರೆಗೆ ವಿಸ್ತರಿಸಲಾಗಿದೆ. ಅರ್ಜಿ ಶುಲ್ಕ ಪಾವಯಿಸುವ ಕೊನೆಯ ದಿನಾಂಕ 05/18/2024.

- 
ಕರ್ನಾಟಕದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು15-05-2024 ರ ರವರಿಗೆ ನಿಗದಿಪಡಿಸಲಾಗಿತ್ತು. ಇದೀಗ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 19-09-2024 ಹಾಗೂ ಕೊನೆಯ ದಿನಾಂಕ  28-09-2024ರ ವರೆಗೆ ಅರ್ಜಿ ಸಲ್ಲಿಸಲು ಹೆಚ್ಚುವರಿ ಅವಕಾಶ ನೀಡಲಾಗಿದೆ. ಆನ್ ಲೈನ್ ಮೂಲಕ ಶುಲ್ಕ ಪಾವತಿಸುವ ಕೊನೆಯ ದಿನಾಂಕ 29/09/2024.

Job Overview
No. of posts
1000
Start Date
19 ಸೆಪ್ಟೆಂಬರ್ 2024
End Date
28 ಸೆಪ್ಟೆಂಬರ್ 2024
Last Payment
29 ಸೆಪ್ಟೆಂಬರ್ 2024
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು PUC(12th) ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಅರ್ಜಿ ಶುಲ್ಕ ಪಾವತಿಸಬೇಕು.
* ಸಾಮಾನ್ಯ ಅಭ್ಯರ್ಥಿಗಳಿಗೆ 2ಎ, 2ಬಿ, 3ಎ, 3ಬಿ ರೂ. 750/-
* ಎಸ್‌ಸಿ, ಎಸ್‌ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ ರೂ. 500/-

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು 
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

To Download Official Notification
To Download the official notification for date Extended
Related Tags: PUC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.