Loading..!

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ 2024ಕ್ಕೆ ಅಧಿಸೂಚನೆ ಪ್ರಕಟಗೊಂಡಿದ್ದು, ಈ ಕುರಿತ ಸಂಪೂರ್ಣ ಮಾಹಿತಿ ನಿಮಗಾಗಿ
Tags: Degree
Published by: Yallamma G | Date:18 ಎಪ್ರಿಲ್ 2024
not found

ಆರ್ ಟಿ ಇ ಕಾಯ್ದೆ 2 ನೇ ವಿಭಾಗದ ಷರತ್ತಿನಲ್ಲಿ ಉಲ್ಲೇಖಿಸಿದಂತೆ ಯಾವುದೇ ಶಾಲೆಗಳಲ್ಲಿ ಶಿಕ್ಷಕರಾಗಿ ನೇಮಕಾತಿಗೆ ಅರ್ಹತೆ ಪಡೆಯಲು NCTE ಯಿಂದ ರೂಪಿಸಿಲಾದ ಮಾರ್ಗಸೂಚಿಗೆ ಅನುಗುಣವಾಗಿ ಸೂಕ್ತ ಸರಕಾರದ ಮೂಲಕ ನಡೆಸಲಾಗುವ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಇದೀಗ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ : 15-04-2024 ರಿಂದ 15-05-2025 ರೊಳಗೆ ಅರ್ಜಿ ಸಲ್ಲಿಸಬಹುದು. 

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ 2024 ಕ್ಕೆ ನಿಗದಿಪಡಿಸಿದ ಪರೀಕ್ಷಾ ಶುಲ್ಕದ ವಿವರ ಈ ಕೆಳಗಿನಂತಿದೆ 
ಸಾಮಾನ್ಯ ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 
- ಪತ್ರಿಕೆ-1 ಅಥವಾ ಪತ್ರಿಕೆ-2 ಕ್ಕೆ ಮಾತ್ರ  750/-
- ಪತ್ರಿಕೆ-1 ಮತ್ತು ಪತ್ರಿಕೆ-2 ಕ್ಕೆ ರೂ 1000/- 


ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ 
- ಪತ್ರಿಕೆ-1 ಅಥವಾ ಪತ್ರಿಕೆ-2 ಕ್ಕೆ ಮಾತ್ರ  350
- ಪತ್ರಿಕೆ-1 ಮತ್ತು ಪತ್ರಿಕೆ-2 ಕ್ಕೆ ರೂ 500/- 


* ಈ ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಪ್ರವೇಶ ಪತ್ರವನ್ನು ದಿನಾಂಕ 20/06/2024ರ ನಂತರ ಇಲಾಖೆಯ ಜಾಲತಾಣದಲ್ಲಿ ಪ್ರಕಟಿಸಲಾಗುವುದು. 
* ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆಯ ಬರೆಯಲು ನಿಗದಿಪಡಿಸಿದ ಅರ್ಹತೆಯ ಕುರಿತ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಅಧಿಸೂಚನೆಯನ್ನು ಗಮನಿಸತಕ್ಕದ್ದು. 
* ಪರೀಕ್ಷಾ ದಿನಾಂಕ 30/06/2024 
* ಈ ಪರೀಕ್ಷೆಯ ವೇಳಾಪಟ್ಟಿಯನ್ನು ಅಧಿಸೂಚನೆಯಲ್ಲಿ ಈಗಾಗಲೇ ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ಈ ಕುರಿತು ಇನ್ನೂ ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ ಲೋಡ್ ಮಾಡಿಕೊಂಡು ಓದಿಕೊಳ್ಳತಕ್ಕದ್ದು.

Comments

Sandeep Kumar K M ಮೇ 9, 2024, 8:43 ಪೂರ್ವಾಹ್ನ