KEA ಯಿಂದ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:6 ಫೆಬ್ರುವರಿ 2024

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಬೆಂಗಳೂರು ಇಲ್ಲಿ ಖಾಲಿ ಇರುವ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ ವೃಂದದಲ್ಲಿರುವ 64 ಸಹಾಯಕ ಅಭಿಯಂತರರು ಮತ್ತು ಪ್ರಥಮ ದರ್ಜೆ ಲೆಕ್ಕ ಸಹಾಯಕ(ಗ್ರೂಪ್- ಸಿ) ವೃಂದದ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಯು ದಿನಾಂಕ10/02/2024 ದಿಂದ ಪ್ರಾರಂಭಗೊಂಡು ದಿನಾಂಕ10/03/2024 ಕ್ಕೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮುಕ್ತಾಯಗೊಳ್ಳುತ್ತದೆ.
ಹುದ್ದೆಗಳ ವಿವರ :64
ಸಹಾಯಕ ಅಭಿಯಂತರರು : 50
ಗ್ರೂಪ್- ಸಿ : 14
No. of posts: 64
Comments