ಉದ್ಯೋಗಾಕಾಂಕ್ಷಿಗಳಿಗೆ ಕೆಇಎ ಬಿಗ್ ಅಪ್ಡೇಟ್! BWSSB ಮತ್ತು KSSIDC ಹುದ್ದೆಗಳಿಗೆ ಮರು ಅರ್ಜಿ ಆಹ್ವಾನ; ಆರಂಭಿಕ ಸಂಬಳ ರೂ. 53,250 ರಿಂದ ಶುರು!
ಬೆಂಗಳೂರು: ಕರ್ನಾಟಕದ ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಮಹತ್ವದ ಸಿಹಿ ಸುದ್ದಿಯೊಂದನ್ನು ನೀಡಿದೆ. ವಿವಿಧ ಇಲಾಖೆಗಳಲ್ಲಿ ಪರಿಶಿಷ್ಟ ಜಾತಿಗೆ ಒಳ ಮೀಸಲಾತಿಯನ್ನು ಅಳವಡಿಸಿಕೊಂಡು ಹೊಸ ರೋಸ್ಟರ್ ಬಿಂದುಗಳನ್ವಯ ನೇಮಕಾತಿ ಪ್ರಕ್ರಿಯೆ ನಡೆಸಲು ಸರ್ಕಾರ ಹೊರಡಿಸಿದ್ದ ಆದೇಶದ ಹಿನ್ನೆಲೆಯಲ್ಲಿ, ಈ ಹಿಂದೆ ಸ್ಥಗಿತಗೊಂಡಿದ್ದ ನೇಮಕಾತಿಗಳಿಗೆ ಈಗ ಪರಿಷ್ಕೃತ ಅಧಿಸೂಚನೆಯನ್ನು ಹೊರಡಿಸಲಾಗಿದೆ.
ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತ (KSSIDC) ಮತ್ತು ಬೆಂಗಳೂರು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಇಲಾಖೆಗಳಲ್ಲಿ ಸ್ಥಳೀಯ ವೃಂದದ (ಕಲ್ಯಾಣ ಕರ್ನಾಟಕ) ಮತ್ತು ಉಳಿಕೆ ಮೂಲ ವೃಂದದ (Non-HK) ದಲ್ಲಿ ಖಾಲಿ ಇರುವ ಗ್ರೂಪ್-ಎ, ಗ್ರೂಪ್-ಬಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಮತ್ತೊಮ್ಮೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA)ವು ರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತ (KSSIDC) ಮತ್ತು ಬೆಂಗಳೂರು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಇಲಾಖೆಗಳಲ್ಲಿ ಒಟ್ಟು 37 ಸಹಾಯಕ ಅಭಿಯಂತರರು ಮತ್ತು ಸಹಾಯಕ ಕಾರ್ಯ ಪಾಲ ಅಭಿಯಂತರರು ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದ್ದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಬೆಂಗಳೂರಿನಲ್ಲಿ - ಕರ್ನಾಟಕ ಸರ್ಕಾರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 04-ಜೂನ್-2026 ರಂದು ಅಥವಾ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಈ ಹಿಂದೆ ಅರ್ಜಿ ಸಲ್ಲಿಸಲು ಸಾಧ್ಯವಾಗದ ಅಭ್ಯರ್ಥಿಗಳಿಗೆ ಇದು ಸುವರ್ಣಾವಕಾಶವಾಗಿದ್ದು, ಈ ಹುದ್ದೆಗಳಿಗೆ ಸಂಬಂಧಿಸಿದಂತೆ ವಿದ್ಯಾರ್ಹತೆ, ವಯೋಮಿತಿ, ಪ್ರಮುಖ ದಿನಾಂಕಗಳು ಹಾಗೂ ಪರೀಕ್ಷಾ ವಿಧಾನದ ಸಂಪೂರ್ಣ ವಿವರಗಳನ್ನು ಕೆಳಗೆ ಸವಿಸ್ತಾರವಾಗಿ ನೀಡಲಾಗಿದೆ.
ಇದನ್ನು ಓದಿ : SSLC ಪಾಸಾದ ಮಹಿಳೆಯರಿಗೆ ಸುವರ್ಣಾವಕಾಶ: ಬಾಗಲಕೋಟೆ ಅಂಗನವಾಡಿಯಲ್ಲಿ 98 ಹುದ್ದೆಗಳಿಗೆ ಇಂದಿನಿಂದಲೇ ಅರ್ಜಿ ಸಲ್ಲಿಸಿ
ಕೆಇಎ ಹುದ್ದೆಯ ಅಧಿಸೂಚನೆ
ಕೆಇಎ ಹುದ್ದೆಯ ಅಧಿಸೂಚನೆ
- ಸಂಸ್ಥೆಯ ಹೆಸರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ( ಕೆಇಎ )
- ಹುದ್ದೆಗಳ ಸಂಖ್ಯೆ: 37
- ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ
- ಹುದ್ದೆಯ ಹೆಸರು: ಗ್ರೂಪ್-ಎ, ಗ್ರೂಪ್-ಬಿ
- ವೇತನ: ತಿಂಗಳಿಗೆ ರೂ. 53,250 - ರೂ. 1,15,460/-
ಹುದ್ದೆಗಳ ವಿವರ ಮತ್ತು ವೇತನ ಶ್ರೇಣಿ (Vacancy & Salary Details)
ಈ ನೇಮಕಾತಿಯ ಮೂಲಕ ಒಟ್ಟು ಪ್ರಮುಖ ಇಂಜಿನಿಯರಿಂಗ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಇಲಾಖಾವಾರು ವಿವರಗಳು ಈ ಕೆಳಗಿನಂತಿವೆ:1. ಕೃಷಿ ಮಾರಾಟ ಇಲಾಖೆ (Agricultural Marketing Department):ಹುದ್ದೆಯ ಹೆಸರು:
ಸಹಾಯಕ ಅಭಿಯಂತರರು (ಸಿವಿಲ್) - ಗ್ರೂಪ್ ಬಿ ಒಟ್ಟು ಹುದ್ದೆಗಳು: 10 ವೇತನ ಶ್ರೇಣಿ: ರೂ. 69,250 - ರೂ. 1,34,200/-
2. ಬೆಂಗಳೂರು ನಗರ ನೀರು ಸರಬರಾಜು ಒಳಚರಂಡಿ ಮಂಡಳಿ (BWSSB):
ಕಲ್ಯಾಣ ಕರ್ನಾಟಕ (ಸ್ಥಳೀಯ ವೃಂದ)
ಸಹಾಯಕ ಅಭಿಯಂತರರು (ಸಿವಿಲ್) (ಗ್ರೂಪ್-ಬಿ): 05 ಹುದ್ದೆಗಳು | ವೇತನ ಶ್ರೇಣಿ: ರೂ. 53,250 ರಿಂದ ರೂ. 1,15,460/-
ಸಹಾಯಕ ಅಭಿಯಂತರರು (ಮೆಕ್ಯಾನಿಕಲ್) (ಗ್ರೂಪ್-ಬಿ): 01 ಹುದ್ದೆ | ವೇತನ ಶ್ರೇಣಿ: ರೂ. 53,250 ರಿಂದ ರೂ. 1,15,460/-
ಉಳಿಕೆ ಮೂಲ ವೃಂದದ (Non-HK)
ಸಹಾಯಕ ಅಭಿಯಂತರರು (ಸಿವಿಲ್) - ಗ್ರೂಪ್ ಬಿ 13 ಹುದ್ದೆಗಳು | ವೇತನ ಶ್ರೇಣಿ:ರೂ. 53,250 - ರೂ. 1,15,460/-
ಸಹಾಯಕ ಅಭಿಯಂತರರು (ಮೆಕ್ಯಾನಿಕಲ್) - ಗ್ರೂಪ್ ಬಿ 02 ಹುದ್ದೆಗಳು | ವೇತನ ಶ್ರೇಣಿ:ರೂ. 53,250 - ರೂ. 1,15,460/-
ಸಹಾಯಕ ಅಭಿಯಂತರರು (ಕಂಪ್ಯೂಟರ್ ಸೈನ್ಸ್) - ಗ್ರೂಪ್ ಬಿ 01 ಹುದ್ದೆಗಳು | ವೇತನ ಶ್ರೇಣಿ:ರೂ. 53,250 - ರೂ. 1,15,460/-
3. ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತ (KSSIDC):
ಕಲ್ಯಾಣ ಕರ್ನಾಟಕ (ಸ್ಥಳೀಯ ವೃಂದ)
ಸಹಾಯಕ ಅಭಿಯಂತರರು (ಸಿವಿಲ್) (ಗ್ರೂಪ್-ಬಿ): 01 ಹುದ್ದೆ | ವೇತನ ಶ್ರೇಣಿ: ರೂ. 69,250 ರಿಂದ ರೂ. 1,34,200/-
ಉಳಿಕೆ ಮೂಲ ವೃಂದದ (Non-HK)
ಸಹಾಯಕ ಕಾರ್ಯಪಾಲಕ ಅಭಿಯಂತರರು (ಸಿವಿಲ್) - ಗ್ರೂಪ್ ಎ 01 ಹುದ್ದೆ | ವೇತನ ಶ್ರೇಣಿ: ರೂ. 83,700 - ರೂ. 1,55,200/-
ಸಹಾಯಕ ಅಭಿಯಂತರರು (ಸಿವಿಲ್) - ಗ್ರೂಪ್ ಬಿ 03 ಹುದ್ದೆಗಳು | ವೇತನ ಶ್ರೇಣಿ: ರೂ. 69,250 - ರೂ. 1,34,200/-
ಅಧಿಕೃತ ವೆಬ್‌ಸೈಟ್ ಗಾಗಿ ಇಲ್ಲಿ ಕ್ಲಿಕ್ ಮಾಡಿ..
ಶೈಕ್ಷಣಿಕ ವಿದ್ಯಾರ್ಹತೆ (Educational Qualification)
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕೆಳಗಿನ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು:
- BWSSB ಸಹಾಯಕ ಇಂಜಿನಿಯರ್ (ಸಿವಿಲ್): ಸಿವಿಲ್ ಇಂಜಿನಿಯರಿಂಗ್ ಅಥವಾ ಟೆಕ್ನಾಲಜಿಯಲ್ಲಿ ಪದವಿ (Degree in Civil Engineering/Technology) ಪಡೆದಿರಬೇಕು. ಇದರೊಂದಿಗೆ ಅಭ್ಯರ್ಥಿಯು ಕನಿಷ್ಠ 6 ತಿಂಗಳ ಅವಧಿಯ ಕಂಪ್ಯೂಟರ್ ಬೇಸಿಕ್ಸ್ ಕೋರ್ಸ್ ಮುಗಿಸಿ ಕಂಪ್ಯೂಟರ್ ಸಾಕ್ಷರತೆ (Computer Literate) ಹೊಂದಿರಬೇಕು.
- BWSSB ಸಹಾಯಕ ಇಂಜಿನಿಯರ್ (ಮೆಕ್ಯಾನಿಕಲ್): ಮೆಕ್ಯಾನಿಕಲ್ ಇಂಜಿನಿಯರಿಂಗ್ ಅಥವಾ ಟೆಕ್ನಾಲಜಿಯಲ್ಲಿ ಪದವಿ ಹೊಂದಿರಬೇಕು. ಜೊತೆಗೆ ಕನಿಷ್ಠ 6 ತಿಂಗಳ ಕಂಪ್ಯೂಟರ್ ಬೇಸಿಕ್ಸ್ ಕೋರ್ಸ್ ಪ್ರಮಾಣಪತ್ರ ಕಡ್ಡಾಯವಾಗಿದೆ.
- KSSIDC ಸಹಾಯಕ ಅಭಿಯಂತರರು (ಸಿವಿಲ್): ಭಾರತದಲ್ಲಿ ಕಾನೂನುಬದ್ಧವಾಗಿ ಸ್ಥಾಪಿತವಾದ ವಿಶ್ವವಿದ್ಯಾಲಯದಿಂದ ಸಿವಿಲ್ ಇಂಜಿನಿಯರಿಂಗ್‌ನಲ್ಲಿ ಬ್ಯಾಚುಲರ್ ಪದವಿ (BE/B.Tech in Civil) ಅಥವಾ ಅದಕ್ಕೆ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದ ವೇಳೆಗೆ ಅಭ್ಯರ್ಥಿಗೆ ಕನಿಷ್ಠ 18 ವರ್ಷಗಳು ತುಂಬಿರಬೇಕು.
ವಿಶೇಷ ಸೂಚನೆಯೆಂದರೆ, ಕರ್ನಾಟಕ ಸರ್ಕಾರದ ಆದೇಶದನ್ವಯ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ ಗರಿಷ್ಠ ವಯೋಮಿತಿಯಲ್ಲಿ 5 ವರ್ಷಗಳ ಸಡಿಲಿಕೆಯನ್ನು ನೀಡಲಾಗಿದೆ. ಅದರಂತೆ ಪರಿಷ್ಕೃತ ಗರಿಷ್ಠ ವಯೋಮಿತಿ ಈ ಕೆಳಗಿನಂತಿದೆ:
- ಸಾಮಾನ್ಯ ಅರ್ಹತೆ (GM) ಅಭ್ಯರ್ಥಿಗಳಿಗೆ: ಗರಿಷ್ಠ 40 ವರ್ಷಗಳು
- ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ: ಗರಿಷ್ಠ 43 ವರ್ಷಗಳು
- ಪರಿಶಿಷ್ಟ ಜಾತಿ (SC) / ಪರಿಶಿಷ್ಟ ಪಂಗಡ (ST) / ಪ್ರವರ್ಗ-1 ಅಭ್ಯರ್ಥಿಗಳಿಗೆ: ಗರಿಷ್ಠ 45 ವರ್ಷಗಳು
- ಮಾಜಿ ಸೈನಿಕರು, ವಿಧವೆಯರು ಮತ್ತು ಜೀತ ಕಾರ್ಮಿಕರಾಗಿದ್ದ ಅಭ್ಯರ್ಥಿಗಳಿಗೆ ನಿಯಮಾನುಸಾರ ಹೆಚ್ಚುವರಿ ವಯೋಮಿತಿ ಸಡಿಲಿಕೆ ಇರಲಿದೆ.
ಅರ್ಜಿ ಶುಲ್ಕದ ವಿವರ (Application Fee)
- ಶುಲ್ಕವನ್ನು ಕೇವಲ ಆನ್‌ಲೈನ್ ಮೂಲಕವೇ ಪಾವತಿಸಬೇಕಿರುತ್ತದೆ. ಸಾಮಾನ್ಯ ಅರ್ಹತೆ ಮತ್ತು ಇತರ ಹಿಂದುಳಿದ ಪ್ರವರ್ಗಗಳು (2A, 2B, 3A, 3B): ರೂ. 750/-
- SC, ST, ಪ್ರವರ್ಗ-1, ಮಾಜಿ ಸೈನಿಕ ಮತ್ತು ತೃತೀಯ ಲಿಂಗಿ ಅಭ್ಯರ್ಥಿಗಳಿಗೆ: ರೂ. 500/-
- ವಿಶೇಷ ಚೇತನ ಅಭ್ಯರ್ಥಿಗಳಿಗೆ (ಶೇ. 40 ಕ್ಕಿಂತ ಹೆಚ್ಚು ಅಂಗವಿಕಲತೆ ಹೊಂದಿರುವವರಿಗೆ): ರೂ. 250/-
- (ಸೂಚನೆ: ಒಂದೇ ಪಠ್ಯಕ್ರಮ ಹೊಂದಿರುವ ಹೆಚ್ಚುವರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸಿದರೆ ಪ್ರತಿ ಹೆಚ್ಚುವರಿ ಹುದ್ದೆಗೆ ಕೇವಲ ರೂ. 100/- ಹೆಚ್ಚುವರಿ ಶುಲ್ಕ ಪಾವತಿಸಬೇಕಾಗುತ್ತದೆ.)
ಈ ಹುದ್ದೆಗಳ ನೇಮಕಾತಿಯನ್ನು ಆಫ್‌ಲೈನ್ - ಒಎಂಆರ್ ಮಾದರಿ (Offline-OMR Type) ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ನಡೆಸಲಾಗುತ್ತದೆ. ಪರೀಕ್ಷಾ ಕೇಂದ್ರಗಳನ್ನು ಬೆಂಗಳೂರು, ಧಾರವಾಡ ಮತ್ತು ಕಲಬುರ್ಗಿ ನಗರಗಳಲ್ಲಿ ಸ್ಥಾಪಿಸಲಾಗುತ್ತದೆ.
ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ:
- SSLC ಯಲ್ಲಿ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಓದದ ಅಥವಾ ಈ ಹಿಂದೆ KPSC/KEA ನಡೆಸಿದ ಕನ್ನಡ ಪರೀಕ್ಷೆಯಲ್ಲಿ ಉತ್ತೀರ್ಣರಾಗದ ಅಭ್ಯರ್ಥಿಗಳಿಗೆ ಈ ಪರೀಕ್ಷೆ ಕಡ್ಡಾಯ.
- ಇದು 150 ಅಂಕಗಳ ಬಹು ಆಯ್ಕೆ ಮಾದರಿಯ ಪರೀಕ್ಷೆಯಾಗಿದ್ದು, ಅರ್ಹತೆ ಪಡೆಯಲು ಕನಿಷ್ಠ 50 ಅಂಕಗಳನ್ನು ಗಳಿಸುವುದು ಕಡ್ಡಾಯವಾಗಿದೆ. ಆದರೆ ಈ ಅಂಕಗಳನ್ನು ಅಂತಿಮ ಆಯ್ಕೆಗೆ ಪರಿಗಣಿಸುವುದಿಲ್ಲ.
- ಸ್ಪರ್ಧಾತ್ಮಕ ಪರೀಕ್ಷೆಯು ಒಟ್ಟು 2 ಪತ್ರಿಕೆಗಳನ್ನು ಒಳಗೊಂಡಿರುತ್ತದೆ. ಪ್ರತಿ ಪತ್ರಿಕೆಯು 300 ಅಂಕಗಳಿಗೆ ಇರಲಿದ್ದು, 2 ಗಂಟೆಗಳ ಕಾಲಾವಕಾಶ ಇರುತ್ತದೆ.
- ಪತ್ರಿಕೆ-1 (ಸಾಮಾನ್ಯ ಪತ್ರಿಕೆ - 300 ಅಂಕಗಳು): ಪ್ರಚಲಿತ ವಿದ್ಯಮಾನಗಳು, ಸಾಮಾನ್ಯ ವಿಜ್ಞಾನ, ಕರ್ನಾಟಕ ಮತ್ತು ಭಾರತದ ಇತಿಹಾಸ ಹಾಗೂ ಭೂಗೋಳಶಾಸ್ತ್ರ, ಸಮಾಜ ವಿಜ್ಞಾನ, ಸಾಮಾನ್ಯ ಬೌದ್ಧಿಕ ಸಾಮರ್ಥ್ಯ, ಭಾರತದ ಸಂವಿಧಾನ, ಸಾರ್ವಜನಿಕ ಆಡಳಿತ, ಗ್ರಾಮೀಣಾಭಿವೃದ್ಧಿ ಮತ್ತು ಪರಿಸರ ವಿಜ್ಞಾನದಂತಹ ವಿಷಯಗಳನ್ನು ಒಳಗೊಂಡಿರುತ್ತದೆ.
- ಪತ್ರಿಕೆ-2 (ನಿರ್ದಿಷ್ಟ ಪತ್ರಿಕೆ - 300 ಅಂಕಗಳು): ಅಭ್ಯರ್ಥಿಯ ಇಂಜಿನಿಯರಿಂಗ್ ವಿಷಯಕ್ಕೆ (ಸಿವಿಲ್ / ಮೆಕ್ಯಾನಿಕಲ್) ಸಂಬಂಧಿಸಿದ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ (ಇದರ ಪಠ್ಯಕ್ರಮವನ್ನು ಪ್ರತ್ಯೇಕವಾಗಿ ಪ್ರಕಟಿಸಲಾಗಿದೆ).
- ಪರೀಕ್ಷೆಯಲ್ಲಿ ತಪ್ಪು ಉತ್ತರಗಳಿಗೆ ನೆಗೆಟಿವ್ ಮಾರ್ಕಿಂಗ್ ಅನ್ವಯವಾಗುತ್ತದೆ. ಪ್ರತಿ ತಪ್ಪು ಉತ್ತರಕ್ಕೆ ನಾಲ್ಕನೇ ಒಂದಂಶದಷ್ಟು (0.25 ಅಂಕಗಳು ಅಥವಾ ಶೇ. 25 ರಷ್ಟು) ಅಂಕಗಳನ್ನು ಕಳೆಯಲಾಗುತ್ತದೆ.
- ಅಂತಿಮ ಆಯ್ಕೆಗೆ ಪರಿಗಣಿತವಾಗಲು ಸ್ಪರ್ಧಾತ್ಮಕ ಪರೀಕ್ಷೆಯ ಒಟ್ಟು ಅಂಕಗಳಲ್ಲಿ ಅಭ್ಯರ್ಥಿಗಳು ಕನಿಷ್ಠ ಶೇಕಡ 35 ರಷ್ಟು ಅಂಕಗಳನ್ನು ಪಡೆಯುವುದು ಕಡ್ಡಾಯವಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ? (How to Apply?)
- ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ: https://cetonline.karnataka.gov.in/kea/
- ಹೋಮ್ ಪೇಜ್‌ನಲ್ಲಿ ನೀಡಿರುವ ಸೂಕ್ತ ಆನ್‌ಲೈನ್ ಅರ್ಜಿ ಲಿಂಕ್ ಅನ್ನು ಕ್ಲಿಕ್ ಮಾಡಿ. ಅಧಿಸೂಚನೆಯಲ್ಲಿ ತಿಳಿಸಿರುವ ನಿಯಮಾವಳಿಗಳ ಪ್ರಕಾರ ನಿಮ್ಮ ವೈಯಕ್ತಿಕ ಮತ್ತು ಶೈಕ್ಷಣಿಕ ವಿವರಗಳನ್ನು ನಿಖರವಾಗಿ ಭರ್ತಿ ಮಾಡಿ.
- ಜಾತಿ, ಆದಾಯ ಮತ್ತು ಮೀಸಲಾತಿ ಪ್ರಮಾಣಪತ್ರಗಳ ಆರ್.ಡಿ (RD) ಸಂಖ್ಯೆಗಳನ್ನು ಕಡ್ಡಾಯವಾಗಿ ನಮೂದಿಸಿ.
- ಕೊನೆಯಲ್ಲಿ ನಿಗದಿತ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕವೇ ಪಾವತಿಸಿ, ಅರ್ಜಿಯ ಪ್ರಿಂಟ್‌ಔಟ್ ಪಡೆದಿಟ್ಟುಕೊಳ್ಳಿ.
- ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ: 21.05.2026
- ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04.06.2026
- ಅರ್ಜಿ ಶುಲ್ಕವನ್ನು ಪಾವತಿ ಮಾಡಲು ಕೊನೆಯ ದಿನಾಂಕ: 05.06.2026 (ಸಂಜೆ 4:00 ಗಂಟೆಯೊಳಗೆ)
- ಪರೀಕ್ಷಾ ದಿನಾಂಕ: ಶೀಘ್ರದಲ್ಲೇ KEA ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು.
ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದವರೆಗೆ ಕಾಯದೆ ತಕ್ಷಣವೇ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ. ಹೆಚ್ಚಿನ ಉದ್ಯೋಗ ಮಾಹಿತಿಗಾಗಿ ನಿರಂತರವಾಗಿ KPSCVaani ವೆಬ್‌ಸೈಟ್ ಅನ್ನು ವೀಕ್ಷಿಸುತ್ತಿರಿ.
Job Overview
- No. of posts
- 37
- Start Date
- 21 ಮೇ 2026
- End Date
- 4 ಜೂನ್ 2026
- Last Payment
- 5 ಜೂನ್ 2026
- Pay Scale
- 53250 - 115460 INR
- Employment Type
- FULL_TIME
- Organization
- KEA (Website)
- Location
- ಬೆಂಗಳೂರು, KA, 560001
Apply online KEA Revised Recruitment Notification 2026
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Related Tags:
Degree
Comments