ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ | ಕೂಡಲೇ ಅರ್ಜಿ ಸಲ್ಲಿಸಿ

ಕರ್ನಾಟಕ ಅರಣ್ಯ ಇಲಾಖೆ, ಕೃಷಿ ಹಾಗೂ ರೈತರ ಕಲ್ಯಾಣ, ಕೃಷಿ ಇಲಾಖೆ, ಸಹಕಾರ ಮತ್ತು ರೈತರ ಕಲ್ಯಾಣ ಸಚಿವಾಲಯ, ಕೃಷಿ ಭವನ, ನವದೆಹಲಿ ಇವರ ಅಡಿಯಲ್ಲಿ ಕಾರ್ಯ ನಿರ್ವಹಿಸುವ ಕರ್ನಾಟಕ ರಾಜ್ಯದ ಕೃಷಿ ವಿಕಾಸ ಯೋಜನೆಯ ಕೃಷಿ ಅರಣ್ಯ ಯೋಜನೆಯ ಅಂಗದ 2025 - 26 ನೇ ಸಾಲಿನಲ್ಲಿ ಗುತ್ತಿಗೆ ಆಧಾರದ ಮೇಲೆ ರಾಜ್ಯ ಮತ್ತು ಜಿಲ್ಲಾ ಮಟ್ಟದ ಸಲಹೆಗಾರರು/ತಾಂತ್ರಿಕ ಸಲಹೆಗಾರರ ಹುದ್ದೆಗಳಿಗೆ ಅಧಿಸೂಚಿನೆಯನ್ನು ಪ್ರಕಟಿಸಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆಯ ವಿವರ :
ಹುದ್ದೆಯ ಹೆಸರು: ರಾಜ್ಯ ಮತ್ತು ಜಿಲ್ಲಾ ಮಟ್ಟದ ಸಲಹೆಗಾರರು / ತಾಂತ್ರಿಕ ಸಲಹೆಗಾರರು
ಶೈಕ್ಷಣಿಕ ಅರ್ಹತೆ : ಎಂ.ಎಸ್.ಸಿ. (ಆಗ್ರಿ) ಕೃಷಿ ಅರಣ್ಯ (Agroforestry) ಅಥವಾ ಸಮಾನ ಪದವಿ ಹೊಂದಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅನುಭವ : ಕನಿಷ್ಠ 5 ವರ್ಷದ ಅನುಭವ ಇದ್ದರೆ ಉತ್ತಮ.
ಆಯ್ಕೆಯಾದ ಅಭ್ಯರ್ಥಿಗಳು ಕೃಷಿ ಆಯೋಗ ಮತ್ತು ಖಾಸಗಿ ಭೂಮಿ, ಸ್ವಾಯತ್ತ ಸಂಸ್ಥೆಗಳ ಸಹಭಾಗಿತ್ವದಡಿ ಯೋಜನೆಗೆ ಸಂಬಂಧಿಸಿದ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕಾಗುತ್ತದೆ. ಆಯ್ಕೆಗೊಂಡ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ. 65,000/- ವೇತನ ನೀಡಲಾಗುತ್ತದೆ.
ಅರ್ಜಿ ಸಲ್ಲಿಕೆ ಬಗ್ಗೆ ಮಾಹಿತಿ :
- ಅರ್ಜಿಯೊಂದಿಗೆ ಶೈಕ್ಷಣಿಕ ಪ್ರಮಾಣಪತ್ರಗಳು, ಅನುಭವ ಪತ್ರ ಮತ್ತು ಇತರೆ ಅಗತ್ಯ - ದಾಖಲಾತಿಗಳನ್ನು ಲಗತ್ತಿಸಿ, ಮಿಂಚಂಚೆ (email) ಮುಖಾಂತರ apccfsf@gmail.com ಗೆ ಸಲ್ಲಿಸಬೇಕು.
- ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ: 24 ಮಾರ್ಚ್ 2025.
- ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯ ವೆಬ್‌ಸೈಟ್ ಅಥವಾ ಸಂಬಂಧಿತ ಕಚೇರಿಯನ್ನು ಸಂಪರ್ಕಿಸಬಹುದು
Comments