ಕರ್ನಾಟಕ ವಿಧಾನಸಭೆ ಸಚಿವಾಲಯದಲ್ಲಿ ಖಾಲಿ ಇರುವ ವರದಿಗಾರರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕರ್ನಾಟಕ ವಿಧಾನಸಭೆ ಸಚಿವಾಲಯದಲ್ಲಿ ಖಾಲಿ ಇರುವ ವರದಿಗಾರರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Yallamma G
19 ಏಪ್ರಿಲ್ 2024 Others
Tags: Degree

ಕರ್ನಾಟಕ ವಿಧಾನಸಭೆ ಸಚಿವಾಲಯದಲ್ಲಿ ಖಾಲಿ ಇರುವ 06 ಕನ್ನಡ ವರದಿಗಾರರು ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ : 30-ಏಪ್ರಿಲ್-2024 ರೊಳಗಾಗಿ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 
ಅರ್ಜಿ ಸಲ್ಲಿಸುವ ವಿಳಾಸ : 
ಕಾರ್ಯದರ್ಶಿ, ಕರ್ನಾಟಕ ವಿಧಾನ ಪರಿಷತ್ ಕಾರ್ಯದರ್ಶಿ
ಅಂಚೆ ಪೆಟ್ಟಿಗೆ ಸಂಖ್ಯೆ. 5074
1 ನೇ ಮಹಡಿ, ವಿಧಾನ ಸೌಧ
ಬೆಂಗಳೂರು - 560001

ಹುದ್ದೆಗಳ ವಿವರ : 06 
ಕನ್ನಡ ರಿಪೋರ್ಟರ್- 5
ಇಂಗ್ಲಿಷ್ ರಿಪೋರ್ಟರ್- 1

Job Overview
No. of posts
6
Start Date
19 ಎಪ್ರಿಲ್ 2024
End Date
30 ಎಪ್ರಿಲ್ 2024
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ಮತ್ತು ಯಾವುದೇ ಅಂಗೀಕೃತ ಸಂಸ್ಥೆ /ವಿಶ್ವವಿದ್ಯಾಲಯದಿಂದ ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು. 
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.

Fee:
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ. ಉಳಿದ ಸಾಮಾನ್ಯ ವರ್ಗದ ಮತ್ತು ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ರೂ.500/-ರ ಇಂಡಿಯನ್ ಪೋಸ್ಟಲ್ ಆರ್ಡರ್ ಅನ್ನು ಈ ಅಧಿಸೂಚನೆ ಹೊರಡಿಸಿರುವ ದಿನಾಂಕದಿಂದ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗಿರುವಂತೆ ಖರೀದಿಸಿ, ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ ಸಚಿವಾಲಯ, ಮೊದಲನೆ ಮಹಡಿ, ವಿಧಾನಸೌಧ, ಬೆಂಗಳೂರು-560001,ಈ ವಿಳಾಸಕ್ಕೆ ಪಾವತಿ ಮಾಡಬೇಕು. ಅರ್ಜಿ ಶುಲ್ಕವನ್ನು ಒಮ್ಮೆ ಪಾವತಿಸಿದ ನಂತರ ಅದನ್ನು ಯಾವುದೇ ಸಂದರ್ಭದಲ್ಲಿಯೂ ಹಿಂದಿರುಗಿಸಲಾಗುವುದಿಲ್ಲ.
Age Limit:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ವರ್ಷ ಹೊಂದಿರಬೇಕು 
* ಸಾಮಾನ್ಯ ಅಭ್ಯರ್ಥಿಗಳಿಗೆ : 35 ವರ್ಷ 
* ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿ ಗರಿಷ್ಟ 38 ವರ್ಷ ಮತ್ತು
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1ರ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 

To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.