ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ಗ್ರೂಪ್-ಸಿ ಹುದ್ದೆಗಳ ನೇರ ನೇಮಕಾತಿಗೆ ಅಧಿಸೂಚನೆ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ಗ್ರೂಪ್-ಸಿ ಹುದ್ದೆಗಳ ನೇರ ನೇಮಕಾತಿಗೆ ಅಧಿಸೂಚನೆ ಪ್ರಕಟ
Published by Yallamma G
20 ಮಾರ್ಚ್ 2023 KPSC Important
Tags: Degree

ಕರ್ನಾಟಕ ಲೋಕಸೇವಾ ಆಯೋಗದಿಂದ ಸಹಕಾರ ಇಲಾಖೆಯ, ಸಹಕಾರ ಸಂಘಗಳ ನಿಬಂಧಕರ ಕಛೇರಿಯಲ್ಲಿನ ಖಾಲಿ ಇರುವ ಗ್ರೂಪ್ ಸಿ ಕಲ್ಯಾಣ ಕರ್ನಾಟಕ ವೃಂದದ ಒಟ್ಟು 53 ಸಹಕಾರ ಸಂಘಗಳ ನಿರೀಕ್ಷಕರು ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ  ಅರ್ಜಿಗಳನ್ನು ಆಹ್ವಾನಿಸಿ ಇದೀಗ ಪ್ರಕಟಣೆ ಹೊರಡಿಸಲಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 02/05/2023 ದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. 

Job Overview
No. of posts
53
Start Date
2 ಎಪ್ರಿಲ್ 2023
End Date
2 ಮೇ 2023
Last Payment
3 ಮೇ 2023
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Fee:

* ಸಾಮಾನ್ಯ ಅಭ್ಯರ್ಥಿಗಳಿಗೆ ರೂ 600/- 
* ಹಿಂದುಳಿದ ವರ್ಗದ (2A/2B/3A/3B) ಅಭ್ಯರ್ಥಿಗಳಿಗೆ ರೂ 300/- 
* ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ 50/- 
* SC/ST/CAT-1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. 

Age Limit:

ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂಡ ವಯೋಮಿತಿಗಳನ್ನು ಮೀರಿರಬಾರದು 
* ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ 
* 2A/2B/3A/3B ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ 
* SC/ST/CAT-1 ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ

To Download the Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.