ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಹುದ್ದೆಗಳ ನೇಮಕಾತಿಗಾಗಿ ಇದೀಗ ಅಧಿಸೂಚನೆ ಪ್ರಕಟ | ಈ ಕುರಿತ ಮಾಹಿತಿ ನಿಮಗಾಗಿ

ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಹುದ್ದೆಗಳ ನೇಮಕಾತಿಗಾಗಿ ಇದೀಗ ಅಧಿಸೂಚನೆ ಪ್ರಕಟ | ಈ ಕುರಿತ ಮಾಹಿತಿ ನಿಮಗಾಗಿ
Published by Savita Halli
02 ಸೆಪ್ಟೆಂಬರ್ 2022 KPSC Important

ಕರ್ನಾಟಕ ಲೋಕಸೇವಾ ಆಯೋಗವು ಹೈದರಾಬಾದ್ - ಕರ್ನಾಟಕ ವೃಂದ ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದಲ್ಲಿನ 5 ಸಹಾಯಕ ಸಾoಖ್ಯಿಕ ಅಧಿಕಾರಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಯ ದಿನಾಂಕ 01/08/2022 ರಿಂದ ಆರಂಭಗೊಳ್ಳಲಿದ್ದು ದಿನಾಂಕ 13/09/2022 ಕ್ಕೆ ಕೊನೆಗೊಳ್ಳಲಿದೆ. ಈ ಹುದ್ದೆಗಳಿಗೆ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಸಲು ನಿಗದಿ ಪಡಿಸಿರುವ ಪ್ರಾರಂಭಿಕ ದಿನಾಂಕ: 01-08-2022
- ಅರ್ಜಿಸಲ್ಲಿಸಲು ಕೊನೆಯ ದಿನಾಂಕ:  13-09-2022
- ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 14-09-2022

Job Overview
No. of posts
5
Start Date
1 ಆಗಸ್ಟ್ 2022
End Date
13 ಸೆಪ್ಟೆಂಬರ್ 2022
Last Payment
14 ಸೆಪ್ಟೆಂಬರ್ 2022
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆಯ  ಮೂಲಕ ಆಯ್ಕೆ ಮಾಡಲಾಗುವುದು.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ರೂ 600/- 
ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ರೂ 300/- 
ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ 50/- ಶುಲ್ಕ ನಿಗದಿಪಡಿಸಲಾಗಿದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿರುತ್ತದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು 
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.