ಕರ್ನಾಟಕ ಲೋಕಸೇವಾ ಆಯೋಗದಿಂದ ಒಟ್ಟು 30 ಹುದ್ದೆಗಳ ನೇಮಕಾತಿಗಾಗಿ ಇದೀಗ ಅಧಿಸೂಚನೆ ಪ್ರಕಟ | ಈ ಕುರಿತ ಮಾಹಿತಿ ನಿಮಗಾಗಿ

ಕರ್ನಾಟಕ ಲೋಕಸೇವಾ ಆಯೋಗದಿಂದ ಒಟ್ಟು 30 ಹುದ್ದೆಗಳ ನೇಮಕಾತಿಗಾಗಿ ಇದೀಗ ಅಧಿಸೂಚನೆ ಪ್ರಕಟ | ಈ ಕುರಿತ ಮಾಹಿತಿ ನಿಮಗಾಗಿ
Published by Basavaraj Halli
19 ಜುಲೈ 2022 KPSC Important
ಕರ್ನಾಟಕ ಲೋಕಸೇವಾ ಆಯೋಗವು ಮುಖ್ಯ ವಿದ್ಯುತ್ ಪರಿವೀಕ್ಷಣಾಲಯದಲ್ಲಿನ ಸಹಾಯಕ ವಿದ್ಯುತ್ ಪರಿವೀಕ್ಷಕರ ಒಟ್ಟು 30 ಹುದ್ದೆಗಳ ನೇಮಕಾತಿಗಾಗಿ ಈಗ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ದಿನಾಂಕ 25 ಜುಲೈ 2022 ರಿಂದ ಆರಂಭಗೊಳ್ಳಲಿದ್ದು ದಿನಾಂಕ 23 ಆಗಸ್ಟ್ 2022ಕ್ಕೆ ಕೊನೆಗೊಳ್ಳಲಿದೆ. ಈ ಹುದ್ದೆಗಳಿಗೆ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
Job Overview
No. of posts
30
Start Date
25 ಜುಲೈ 2022
End Date
23 ಆಗಸ್ಟ್ 2022
Last Payment
24 ಆಗಸ್ಟ್ 2022
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆಯ  ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ಅಥವಾ ಎಲೆಕ್ಟ್ರಿಕಲ್&ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ರೂ 600/- 

ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ರೂ 300/- 

ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ 50/- ಶುಲ್ಕ ನಿಗದಿಪಡಿಸಲಾಗಿದೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿರುತ್ತದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು 

- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ 

- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
To Download the Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.