KPSCಯಿಂದ ಲೋಕೋಪಯೋಗಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

KPSCಯಿಂದ ಲೋಕೋಪಯೋಗಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
23 ಜನವರಿ 2025 KPSC
Tags: Engineering

ಕರ್ನಾಟಕ ಲೋಕಸೇವಾ ಆಯೋಗದಿಂದ (KPSC) ಲೋಕೋಪಯೋಗಿ ಇಲಾಖೆಯಲ್ಲಿ ಖಾಲಿ ಇರುವ42 (ಹೈದ್ರಾಬಾದ್-ಕರ್ನಾಟಕ ವೃಂದ 12 ಮತ್ತು ಉಳಿಕೆ ಮೂಲ ವೃಂದ) ಸಹಾಯಕ ಕಾರ್ಯ ಪಾಲಕ ಇಂಜಿನಿಯರ್ (ಗ್ರೇಡ್-1) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ  ಅರ್ಜಿಗಳನ್ನು ಆಹ್ವಾನಿಸಿ ಇದೀಗ ಪ್ರಕಟಣೆ ಹೊರಡಿಸಲಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

ಕರ್ನಾಟಕ ಲೋಕಸೇವಾ ಆಯೋಗದಿಂದ (KPSC) ಲೋಕೋಪಯೋಗಿ ಇಲಾಖೆಯಲ್ಲಿ ಖಾಲಿ ಇರುವ42 (ಹೈದ್ರಾಬಾದ್-ಕರ್ನಾಟಕ ವೃಂದ 12 ಮತ್ತು ಉಳಿಕೆ ಮೂಲ ವೃಂದ 30) ಸಹಾಯಕ ಕಾರ್ಯ ಪಾಲಕ ಇಂಜಿನಿಯರ್ (ಗ್ರೇಡ್-1) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು 04/ನವೆಂಬರ್/2024 ರ ವರೆಗೆ ನಿಗದಿಪಡಿಸಲಾಗಿತ್ತು, ಇದೀಗ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು 03/ಫೆಬ್ರುವರಿ/2025 ವರೆಗೆ ವಿಸ್ತರಿಸಲಾಗಿದೆ.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
42
Start Date
20 ಜನವರಿ 2025
End Date
3 ಫೆಬ್ರುವರಿ 2025
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.


ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ದಿನಾಂಕ 20/01/2025 ರಿಂದ ಆರಂಭಗೊಂಡು ದಿನಾಂಕ 03/02/2025 ರೊಳಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವಾಗಿದೆ. 

Qualification:
ಈ ಹುದ್ದೆಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಇಂಜಿನಿಯರಿಂಗ್ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Fee:

ಈ ಹುದ್ದೆಗಳಿಗೆ ಅರ್ಜಿ ಶುಲ್ಕವನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
* ಸಾಮಾನ್ಯ ಅಭ್ಯರ್ಥಿಗಳಿಗೆ ರೂ 600/- 
* ಹಿಂದುಳಿದ ವರ್ಗದ (2A/2B/3A/3B) ಅಭ್ಯರ್ಥಿಗಳಿಗೆ ರೂ 300/- 
* ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ 50/- 
* SC/ST/CAT-1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷಗಳನ್ನು ಪೂರೈಸಿರಬೇಕು ಹಾಗೂ ಗರಿಷ್ಠ 35 ವರ್ಷ ವಯೋಮಿತಿಗಳನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ:
SC/ST/Cat-1 ಅಭ್ಯರ್ಥಿಗಳಿಗೆ: 05 ವರ್ಷಗಳು
2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ: 03 ವರ್ಷಗಳು
PWD ಅಭ್ಯರ್ಥಿಗಳಿಗೆ: 10 ವರ್ಷಗಳು

To Download Official Notification
To Download the official notification for date Extended
Related Tags: Engineering
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.