ಕರ್ನಾಟಕ ಲೋಕಸೇವಾ ಆಯೋಗದಿಂದ ಆರ್ಥಿಕ ಮತ್ತು ಸಾಂಖಿಕ ಇಲಾಖೆಯಲ್ಲಿ ಖಾಲಿ ಇರುವ 180 ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

Published by: Yallamma G
|
ಕರ್ನಾಟಕ ಲೋಕಸೇವಾ ಆಯೋಗದಿಂದ ಆರ್ಥಿಕ ಮತ್ತು ಸಾಂಖಿಕ  ಇಲಾಖೆಯಲ್ಲಿ ಖಾಲಿ ಇರುವ  180 ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಕರ್ನಾಟಕ ಲೋಕಸೇವಾ ಆಯೋಗದಿಂದ ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯಗಳಲ್ಲಿ ಖಾಲಿ ಇರುವ 180 ಸಾಂಖ್ಯಿಕ ನಿರೀಕ್ಷಕರು ಮತ್ತು ಸಹಾಯಕ ಸಾಂಖ್ಯಿಕ ಅಧಿಕಾರಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು. 

ಪ್ರಮುಖ ದಿನಾಂಕಗಳು :
* ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯಗಳಲ್ಲಿ ಸಾಂಖ್ಯಿಕ ನಿರೀಕ್ಷಕರು ಹೈದರಾಬಾದ್ ಕರ್ನಾಟಕ ವೃಂದದ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಯ ದಿನಾಂಕ 17/10/2022 ರಿಂದ ಆರಂಭಗೊಳ್ಳಲಿದ್ದು ದಿನಾಂಕ 15/11/2022 ಕ್ಕೆ ಕೊನೆಗೊಳ್ಳಲಿದೆ. 
* ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯಗಳಲ್ಲಿ ಸಾಂಖ್ಯಿಕ ನಿರೀಕ್ಷಕರು ಉಳಿಕೆ ಮೂಲ ವೃಂದದ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಯ ದಿನಾಂಕ 19/10/2022 ರಿಂದ ಆರಂಭಗೊಳ್ಳಲಿದ್ದು ದಿನಾಂಕ 17/11/2022 ಕ್ಕೆ ಕೊನೆಗೊಳ್ಳಲಿದೆ. 
* ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯಗಳಲ್ಲಿ ಸಹಾಯಕ ಸಾಂಖ್ಯಿಕ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಯ ದಿನಾಂಕ 20/10/2022 ರಿಂದ ಆರಂಭಗೊಳ್ಳಲಿದ್ದು ದಿನಾಂಕ 18/11/2022 ಕ್ಕೆ ಕೊನೆಗೊಳ್ಳಲಿದೆ. 

ಹುದ್ದೆಗಳ ವಿವರ : 180
* ಸಾಂಖ್ಯಿಕ ನಿರೀಕ್ಷಕರು (ಹೈದರಾಬಾದ್ ಕರ್ನಾಟಕ ವೃಂದ) : 17
* ಸಾಂಖ್ಯಿಕ ನಿರೀಕ್ಷಕರು (ಉಳಿಕೆ ಮೂಲ ವೃಂದ) : 105
* ಸಹಾಯಕ ಸಾಂಖ್ಯಿಕ ಅಧಿಕಾರಿ : 58

Job Overview
No. of posts
180
Start Date
17 ಅಕ್ಟೋಬರ್ 2022
End Date
15 ನವೆಂಬರ್ 2022
Last Payment
16 ನವೆಂಬರ್ 2022
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಸ್ನಾತಕೋತ್ತರ ಪದವಿ/ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ರೂ 600/-
ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ರೂ 300/-
ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ 50/- ಶುಲ್ಕ ನಿಗದಿಪಡಿಸಲಾಗಿದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿರುತ್ತದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

Comments