Loading..!

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Surekha Halli | Date:9 ಮಾರ್ಚ್ 2021
not found
ಕರ್ನಾಟಕ ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ (KREIS) ವ್ಯಾಪ್ತಿಯಲ್ಲಿ ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಆಂಗ್ಲ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿಶಾಲೆ / ಪದವಿ ಪೂರ್ವ ವಿಜ್ಞಾನ ವಸತಿ ಕಾಲೇಜುಗಳಲ್ಲಿ ಖಾಲಿಯಿರುವ ಶಿಕ್ಷಕರ / ಉಪನ್ಯಾಸಕರ ಹುದ್ದೆಗಳಿಗೆ ಅತಿಥಿ ಶಿಕ್ಷಕರು / ಅತಿಥಿ ಉಪನ್ಯಾಸಕರುಗಳನ್ನು 2020-21 ನೇ ಸಾಲಿನಲ್ಲಿ ಗೌರವಧನದ ಆಧಾರದ ಮೇಲೆ ಜಿಲ್ಲಾ ಹಂತದಲ್ಲಿ ನಿಯಮಾವಳಿಗಳಿಗೆ ಒಳಪಟ್ಟು ನೇಮಕಾತಿ ಮಾಡಿಕೊಳ್ಳಲಾಗುತ್ತದೆ, ಆದ್ದರಿಂದ ಅರ್ಹ ಅಭ್ಯರ್ಥಿಗಳು (ನಿರುದ್ಯೋಗಿಯಾದ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ನಿವೃತ್ತಿ ಶಿಕ್ಷಕರು / ಉಪನ್ಯಾಸಕರು) ಆಯಾ ಜಿಲ್ಲಾ ಕೇಂದ್ರಗಳಲ್ಲಿ ಸಂಬಂಧಿಸಿದ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ / ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ / ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗಳ ಜಿಲ್ಲಾ ಕಚೇರಿಗಳಲ್ಲಿ  ಜಿಲ್ಲಾ ಮಟ್ಟದ ಅಧಿಕಾರಿಗಳನ್ನು / ವಸತಿ ಶಾಲೆ ಮತ್ತು ಕಾಲೇಜುಗಳ ಪ್ರಾಂಶುಪಾಲರನ್ನು ಸಂಪರ್ಕಿಸಿ ಸಂಬಂಧಿಸಿದ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ ಒಬ್ಬ ಅಭ್ಯರ್ಥಿ ಹಲವು ಜಿಲ್ಲೆಗಳಲ್ಲಿ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.

 

- ವಸತಿ ಶಾಲೆ : ಕನ್ನಡ ಭಾಷೆ, ಆಂಗ್ಲ ಭಾಷೆ, ಹಿಂದಿ ಭಾಷೆ, ಗಣಿತ, ವಿಜ್ಞಾನ, ಸಮಾಜ ವಿಜ್ಞಾನ 

- ಪದವಿ ಪೂರ್ವ ವಸತಿ ಯುದ್ಧ ವಿದ್ಯಾಲಯ ಕಾಲೇಜು : ಕನ್ನಡ ಭಾಷೆ, ಆಂಗ್ಲ ಭಾಷೆ, ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ, ಜೀವಶಾಸ್ತ್ರ, ಕಂಪ್ಯೂಟರ್, ವಿಜ್ಞಾನ

 

* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಪತ್ರಿಕಾ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಿ.

Comments