ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಖಾಲಿ ಇರುವ KSISF ನ 63 PSI ಹುದ್ದೆಗಳ ನೇಮಕಾತಿಗೆ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಖಾಲಿ ಇರುವ KSISF ನ 63 PSI ಹುದ್ದೆಗಳ ನೇಮಕಾತಿಗೆ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ
Published by Basavaraj Halli
10 ಫೆಬ್ರವರಿ 2022 Karnataka State Police State Important
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಖಾಲಿ ಇರುವ ಒಟ್ಟು 63 KSISF ಸಬ್-ಇನ್ಸ್‍ಪೆಕ್ಟರ್ ಹುದ್ದೆಗಳ ನೇಮಕಾತಿಗಾಗಿ ಇಲಾಖೆಯು ಇದೀಗ ಅಧಿಸೂಚನೆಯನ್ನು ಪ್ರಕಟಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭ : 10 ಫೆಬ್ರುವರಿ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 03 ಮಾರ್ಚ್ 2022
ಶುಲ್ಕ ಪಾವತಿಗೆ ಕೊನೆಯ ದಿನಾಂಕ : 05 ಮಾರ್ಚ್ 2022
Job Overview
No. of posts
63
Start Date
10 ಫೆಬ್ರುವರಿ 2022
End Date
3 ಮಾರ್ಚ್ 2022
Last Payment
5 ಮಾರ್ಚ್ 2022
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ದೈಹಿಕ ಪರೀಕ್ಷೆ ಹಾಗೂ ಲಿಖಿತ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಯು.ಜಿ.ಸಿ. ಇಂದ ಮಾನ್ಯತೆ ಪಡೆದಿರುವ ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಪದವಿ ಅಥವಾ ತತ್ಸಮಾನ ಪದವಿಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ, ಅಂದರೆ 03.03.2022ಕ್ಕೆ ಹೊಂದಿರಬೇಕು.
Fee:
ಸಾಮಾನ್ಯ ವರ್ಗ, ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ ₹500/-

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ₹250/- 
Age Limit:
ಸಾಮಾನ್ಯ ಅಭ್ಯರ್ಥಿಗಳಿಗೆ:

ಅರ್ಜಿಯನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಂದರೆ 03.03.2022ಕ್ಕೆ ಪುರುಷ, ಮಹಿಳಾ ಮತ್ತು ತೃತೀಯ ಲಿಂಗದ ಅಭ್ಯರ್ಥಿಗೆ ಕನಿಷ್ಟ 21 ವರ್ಷ ವಯಸ್ಸಾಗಿರಬೇಕು. ಹಾಗೂ ಈ ಕೆಳಕಂಡ ವಯಸ್ಸು ಮೀರಿರಬಾರದು.

ಎ) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 28 ವರ್ಷಗಳು.

ಬಿ) ಇತರೆ ಅಭ್ಯರ್ಥಿಗಳಿಗೆ 26 ವರ್ಷಗಳು. 
Download : ಅಧಿಕೃತ ಪತ್ರಿಕಾ ಪ್ರಕಟಣೆಯನ್ನು ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.