Loading..!

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಸುಮಾರು 3745 ಚಾಲಕ ಮತ್ತು ಚಾಲಕ ಕಂ ನಿರ್ವಾಹಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

Tags: SSLC
Published by: Basavaraj Halli
|
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಸುಮಾರು 3745 ಚಾಲಕ ಮತ್ತು ಚಾಲಕ ಕಂ ನಿರ್ವಾಹಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಒಟ್ಟು ಇರುವ 3745 ಚಾಲಕ ಮತ್ತು ಚಾಲಕ ಕಂ ನಿರ್ವಾಹಕ, ದರ್ಜೆ-3 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲು ನಿಗಮವು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ 20 ಮಾರ್ಚ್ 2020 ಕೊನೆ ದಿನವಾಗಿರುತ್ತದೆ
Job Overview
No. of posts
3745
Start Date
24 ಫೆಬ್ರುವರಿ 2020
End Date
5 ಮೇ 2020
Last Payment
8 ಮೇ 2020
Employment Type
FULL_TIME
Organization
KPSC Vaani (Website)
Location
KA,
Qualification:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ವಿದ್ಯಾರ್ಹತೆ : ಅಭ್ಯರ್ಥಿಗಳು ಚಾಲಕ ಮತ್ತು ಚಾಲಕ ಕಂ ನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು SSLC ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು
ಚಾಲಕ ಹುದ್ದೆಗೆ- ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಚಾಲ್ತಿಯಲ್ಲಿರುವ ಪ್ರಯಾಣಿಕರ / ಸರಕು ಸಾಗಣೆಗೆ ಭಾರಿ ವಾಹನ ಚಾಲನಾ ಪರವಾನಿಗೆ ಹೊಂದಿ ಎರಡು ವರ್ಷ ಪೂರ್ಣಗೊಂಡಿರಬೇಕು ಜೊತೆಗೆ ಕರ್ನಾಟಕ ಬ್ಯಾಡ್ಜ್ ಹೊಂದಿರಬೇಕು.
-ಚಾಲಕ ಕಂ ನಿರ್ವಾಹಕ ಹುದ್ದೆಗೆ: ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಚಾಲ್ತಿಯಲ್ಲಿರುವ ಪ್ರಯಾಣಿಕರ / ಸರಕು ಸಾಗಣೆಗೆ ಭಾರಿ ವಾಹನ ಚಾಲನಾ ಪರವಾನಗಿ ಹೊಂದಿ ಎರಡು ವರ್ಷ ಪೂರ್ಣಗೊಂಡಿರಬೇಕು ಜೊತೆಗೆ ಕರ್ನಾಟಕ ಬ್ಯಾಡ್ಜ್ ಹೊಂದಿರಬೇಕು ಹಾಗೂ ಚಾಲ್ತಿಯಲ್ಲಿರುವ ಎಂ ವಿ ನಿರ್ವಾಹಕ ಪರವಾನಿಗೆ ಹಾಗೂ ಬ್ಯಾಡ್ಜ್ ಹೊಂದಿರಬೇಕು
Fee:
* ಸಾಮಾನ್ಯ ವರ್ಗ/2ಎ/2ಬಿ/3ಎ/3ಬಿ ವರ್ಗದ ಅಭ್ಯರ್ಥಿಗಳಿಗೆ ₹ 500/-
* ಪ.ಜಾ./ ಪ.ಪಂ./ ವರ್ಗ-1/ ಮಾಜಿ ಸೈನಿಕ/ಅಶಕ್ತ ಮಾಜಿ ಸೈನಿಕರ ಅವಲಂಬಿತ ಅಭ್ಯರ್ಥಿಗಳಿಗೆ ₹ 250/-
Age Limit:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಈ ಕೆಳಕಂಡಂತೆ ವಯೋಮಿತಿ ಹೊಂದಿರತಕ್ಕದ್ದು.
* ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಕನಿಷ್ಠ 24 ವರ್ಷ ಮತ್ತು ಗರಿಷ್ಠ 35 ವರ್ಷ
* ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ ಕನಿಷ್ಠ 24 ವರ್ಷ ಮತ್ತು ಗರಿಷ್ಠ 38 ವರ್ಷ
* ಪ.ಜಾ/ಪ.ಪಂ/ಪ್ರವರ್ಗ-1 ಅಭ್ಯರ್ಥಿಗಳಿಗೆ ಕನಿಷ್ಠ 24 ವರ್ಷ ಮತ್ತು ಗರಿಷ್ಠ 40 ವರ್ಷ
to download official notification
Related Tags: SSLC

Comments