ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ಇಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕ / ಸಹಾಯಕ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಅಹ್ವಾನ.

ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ಇಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕ  / ಸಹಾಯಕ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಅಹ್ವಾನ.
02 ಜುಲೈ 2019 Others
ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದಲ್ಲಿ ಯು.ಜಿ.ಸಿ (UGC) ನಿಯಮಗಳ ಪ್ರಕಾರ ಅರ್ಹತೆಯನ್ನು ಹೊಂದಿದ ಅಭ್ಯರ್ಥಿಗಳಿಂದ, ಕರ್ನಾಟಕ ವಿಶ್ವವಿದ್ಯಾಲಯದ ಕರ್ನಾಟಕ ಕಲಾ ಮಹಾವಿದ್ಯಾಲಯ / ಕರ್ನಾಟಕ ವಿಜ್ಞಾನ ಮಹಾವಿದ್ಯಾಲಯ / ಬಿಬಿಎ / ಬಿಸಿಎ / ಕಾನೂನು / ಸಂಗೀತ / ಶಿಕ್ಷಣ ಮಹಾವಿದ್ಯಾಲಯದಲ್ಲಿ (ಯು.ಜಿ) ಸನ್ 2019 - 20 ನೇ ಸಾಲಿನ ಎಲ್ಲ ತರಗತಿಗಳಿಗೆ ಅಗತ್ಯತೆಗನುಸಾರವಾಗಿ ಅತಿಥಿ ಉಪನ್ಯಾಸಕ / ಸಹಾಯಕ ಉಪನ್ಯಾಸಕರಾಗಿ ಸೇವೆ ಸಲ್ಲಿಸಲಿಚ್ಛಿಸುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. (ಯು.ಜಿ.ಸಿ ನೆಟ್ / ಸ್ಲೇಟ್ ಉತ್ತೀರ್ಣತೆ / ಪಿಎಚ್ ಡಿ ಪದವಿ ಪಡೆದವರಿಗೆ ಆದ್ಯತೆ ನೀಡಲಾಗುತ್ತದೆ). ನಿಗದಿತ ಅರ್ಜಿ ನಮೂನೆಯನ್ನು ಸಂಬಂಧಿಸಿದ ಪ್ರಾಚಾರ್ಯರು ಕ.ವಿ.ವಿ. ಅಧೀನ ಮಹಾವಿದ್ಯಾಲಯಗಳಿಂದ ಖುದ್ದಾಗಿ ಅಥವಾ ಈ ಕೆಳಗೆ ನೀಡಿರುವ ಲಿಂಕ್ ಮುಖಾಂತರ ಪಡೆಯಬಹುದು. ವಿಶೇಷ ಸೂಚನೆ: ಕರ್ನಾಟಕ ವಿಶ್ವವಿದ್ಯಾಲಯದ ಅಧೀನ ಮಹಾವಿದ್ಯಾಲಯಗಳು / ಸ್ನಾತಕೋತ್ತರ ವಿಭಾಗಗಳ / ಸ್ನಾತಕೋತ್ತರ ಕೇಂದ್ರಗಳಲ್ಲಿ ಮೂರು ಅಥವಾ ಮೂರಕ್ಕಿಂತ ಹೆಚ್ಚಿನ ವರ್ಷಗಳ ಸೇವಾ ಅನುಭವ ಹೊಂದಿದ ಅಭ್ಯರ್ಥಿಗಳಿಗೆ ಸಮಾಲೋಚನೆ / ಸಂದರ್ಶನಕ್ಕೆ ವಿನಾಯಿತಿ ನೀಡಲಾಗಿರುತ್ತದೆ ಹಾಗೂ ಸದರಿ ಅಭ್ಯರ್ಥಿಗಳು ಸೇವಾ ಪ್ರಮಾಣ ಪತ್ರದ ಜೊತೆಗೆ ಸಂಬಂಧಿಸಿದ ಪ್ರಾಚಾರ್ಯರು / ಅಧ್ಯಕ್ಷರು / ಆಡಳಿತಾಅಧಿಕಾರಿಗಳಿಂದ ಪಡೆದ ನಡುವಳಿಕೆ ಪ್ರಮಾಣ ಪತ್ರದ ಮೂಲ ಪ್ರತಿಯನ್ನು ಅರ್ಜಿಯೊಂದಿಗೆ ಕಡ್ಡಾಯವಾಗಿ ಲಗತ್ತಿಸುವುದು ( ಶೈಕ್ಷಣಿಕ ಸಾಲಿಗೆ ಅಧಿಸೂಚನೆ ಹೊರಡಿಸಿದ ದಿನಾಂಕದಿಂದ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಪಡೆದ ನಡುವಳಿಕೆ ಪ್ರಮಾಣ ಪತ್ರಗಳನ್ನು ಮಾತ್ರ ಪರಿಗಣಿಸಲಾಗುವುದು) ಈ ಹುದ್ದೆಗಳ ಕುರಿತ ಸಂಪೂರ್ಣ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಸೂಚನೆ ಮತ್ತು ಅರ್ಜಿಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದು
Job Overview
No. of posts
90
Start Date
2 ಜುಲೈ 2019
End Date
5 ಜುಲೈ 2019
Last Payment
5 ಜುಲೈ 2019
Employment Type
FULL_TIME
Organization
KPSC Vaani (Website)
Location
ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ಅದಿನ ಕಾಲೇಜುಗಳು, KA,
ಕರ್ನಾಟಕ ಶಿಕ್ಷಕರ ನೇಮಕಾತಿ ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.