ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿ ಮಂಡ್ಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Surekha Halli | Date:3 ಎಪ್ರಿಲ್ 2021
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿ ಮಂಡ್ಯದಲ್ಲಿ ಖಾಲಿ ಇರುವ ಬೆರಳಚ್ಚುಗಾರರ ಮತ್ತು ಶೀಘ್ರಲಿಪಿಗಾರರ ನೇರ ನೇಮಕಾತಿಗಾಗಿ ಮಂಡ್ಯ ಘಟಕದಲ್ಲಿ ಹಿಂಬಾಕಿ ಇರುವ 7 ಮತ್ತು ಹೊಸದಾಗಿ ಅನುಮತಿಸಲಾದ ಒಂದು ಸೇರಿ ಒಟ್ಟು 8 ಬೆರಳಚ್ಚುಗಾರರ ಹುದ್ದೆಗಳಿಗೆ ಮತ್ತು ಶೀಘ್ರಲಿಪಿಗಾರ - 10 ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 03-04-2021
* ಹುದ್ದೆಗಳ ವಿವರ :
- ಬೆರಳಚ್ಚುಗಾರ - 08
- ಶೀಘ್ರಲಿಪಿಗಾರ - 10
ಅರ್ಜಿ ಸಲ್ಲಿಸಬೇಕಾದ ವಿಳಾಸ: ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಮಂಡ್ಯ ಜಿಲ್ಲೆ, ಮಂಡ್ಯ.
No. of posts: 18
Comments