ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿ ಮಂಡ್ಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿ ಮಂಡ್ಯದಲ್ಲಿ ಖಾಲಿ ಇರುವ ಬೆರಳಚ್ಚುಗಾರರ ಮತ್ತು ಶೀಘ್ರಲಿಪಿಗಾರರ ನೇರ ನೇಮಕಾತಿಗಾಗಿ ಮಂಡ್ಯ ಘಟಕದಲ್ಲಿ ಹಿಂಬಾಕಿ ಇರುವ 7 ಮತ್ತು ಹೊಸದಾಗಿ ಅನುಮತಿಸಲಾದ ಒಂದು ಸೇರಿ ಒಟ್ಟು 8 ಬೆರಳಚ್ಚುಗಾರರ ಹುದ್ದೆಗಳಿಗೆ ಮತ್ತು ಶೀಘ್ರಲಿಪಿಗಾರ - 10 ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 03-04-2021
* ಹುದ್ದೆಗಳ ವಿವರ :
- ಬೆರಳಚ್ಚುಗಾರ - 08
- ಶೀಘ್ರಲಿಪಿಗಾರ - 10
ಅರ್ಜಿ ಸಲ್ಲಿಸಬೇಕಾದ ವಿಳಾಸ: ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಮಂಡ್ಯ ಜಿಲ್ಲೆ, ಮಂಡ್ಯ.
Job Overview
- No. of posts
- 18
- Start Date
- 6 ಮಾರ್ಚ್ 2021
- End Date
- 3 ಎಪ್ರಿಲ್ 2021
- Employment Type
- FULL_TIME
- Organization
- KPSC Vaani (Website)
- Location
- ಮಂಡ್ಯ, KA,
Selection Procedure:
- 15 ನಿಮಿಷಗಳ ಉಕ್ತಲೇಖ ಮತ್ತು ಸಂದರ್ಶನ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯುವುದು.
Qualification:
- ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ SSLC ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣತೆ ಮತ್ತು ಕನ್ನಡ ಮತ್ತು ಇಂಗ್ಲಿಷ್ ಬೆರಳಚ್ಚು ಹಿರಿಯಶ್ರೇಣಿ ಪರೀಕ್ಷೆಗಳಲ್ಲಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣತೆ ಹೊಂದಿರಬೇಕು.
Fee:
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ 200/-
- ಪ್ರವರ್ಗ 2ಎ, 2ಬಿ, 3ಎ, 3ಬಿಗೆ ಸೇರಿದ ಅಭ್ಯರ್ಥಿಗಳಿಗೆ ರೂ 100/-
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ
Age Limit:
ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಕನಿಷ್ಟ 18 ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು.
ಗರಿಷ್ಟ ವಯೋಮಿತಿ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ : 35 ವರ್ಷ
2ಎ, 2ಬಿ, 3ಎ, 3ಬಿ ವರ್ಗದ ಅಭ್ಯರ್ಥಿಗಳಿಗೆ : 38 ವರ್ಷ
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪ್ರವರ್ಗ- 1 ರ ಅಭ್ಯರ್ಥಿಗಳಿಗೆ : 40 ವರ್ಷ
Related Tags:
SSLC
Comments