ಧಾರವಾಡದ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ತಾಂತ್ರಿಕ ಸಹಾಯಕ, ಡೇಟಾ ಎಂಟ್ರಿ ಆಪರೇಟರ್ ಸೇರಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Surekha Halli | Date:16 ಜೂನ್ 2021
ಕೇಂದ್ರ ಸರ್ಕಾರದ ಮಹಾತ್ಮಾ ಗಾಂಧಿ ರಾಷ್ಟೀಯ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಧಾರವಾಡದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ 18-06-2021 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
* ಪ್ರಮುಖ ದಿನಾಂಕಗಳು :
- ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 03-06-2021
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 18-06-2021
* ಹುದ್ದೆಗಳ ವಿವರ :
- ಸಹಾಯಕ ಜಿಲ್ಲಾ ಸಮನ್ವಯ ಅಧಿಕಾರಿ ADPC - 1
- ಜಿಲ್ಲಾ ಐ.ಇ.ಸಿ.ಸಂಯೋಜಕರು DIEC - 1
- ತಾಲೂಕಾ ಎಂ.ಐ.ಎಸ್. ಸಂಯೋಜಕರು TIMS - 2
- ತಾಲೂಕ ಐ.ಇ.ಸಿ. ಸಂಯೋಜಕರಾದ TIEC - 2
- ತಾಲ್ಲೂಕು ಸಂಯೋಜಕರು TC - 2
- ಡಾಟಾ ಎಂಟ್ರಿ ಆಪರೇಟರ್ DEO - 2
- ತಾಂತ್ರಿಕ ಸಹಾಯಕರು (ಕೃಷಿ) - 1
- ತಾಂತ್ರಿಕ ಸಹಾಯಕರು (ಅರಣ್ಯ) - 2
- ತಾಲ್ಲೂಕ ತಾಂತ್ರಿಕ ಸಹಾಯಕರು TAE - 1
No. of posts: 14
Comments