Loading..!

ರಾಷ್ಟ್ರೀಯ ರಕ್ಷಣಾ ಅಕಾಡೆಮಿಯಲ್ಲಿ(NDa) ಖಾಲಿ ಇರುವ ಗ್ರೂಪ್-ಸಿ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ

Tags: PUC SSLC
Published by: Yallamma G
|
ರಾಷ್ಟ್ರೀಯ ರಕ್ಷಣಾ ಅಕಾಡೆಮಿಯಲ್ಲಿ(NDa) ಖಾಲಿ ಇರುವ ಗ್ರೂಪ್-ಸಿ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ರಕ್ಷಣಾ ಅಕಾಡೆಮಿಯಲ್ಲಿ ಖಾಲಿ ಇರುವ 286 ಗ್ರೂಪ್-ಸಿ ಹುದ್ದೆಗಳಾದ ಪೇಂಟರ್, ಕುಕ್, ಫೇರ್ ಮ್ಯಾನ್ ಎಂಟಿಎಸ್ ಮತ್ತು ಸಿನಿಮಾ ಪ್ರೊಜೆಕ್ಷನಿಸ್ಟ್ ಸೇರಿದನಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ದಿನಾಂಕ 31/12/2022 ರಿಂದ ಅರ್ಜಿ ಸಲ್ಲಿಕೆ ಆರಂಭಗೊಂಡಿದ್ದು ಅರ್ಜಿ ಸಲ್ಲಿಕೆ ಆರಂಭಗೊಂಡ 21 ದಿನಗಳ ಒಳಗಾಗಿ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
* ಒಟ್ಟು ಹುದ್ದೆಗಳು 286 ಈ ಹುದ್ದೆಗಳ ಪೈಕಿ ಅಂಗವಿಕಲ ಅಭ್ಯರ್ಥಿಗಳಿಗೆ 10 ಹುದ್ದೆಗಳು ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ 25 ಹುದ್ದೆಗಳನ್ನು ಮೀಸಲಿರಿಸಲಾಗಿದೆ.

Job Overview
No. of posts
286
Start Date
31 ಡಿಸೆಂಬರ್ 2022
End Date
20 ಜನವರಿ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳ ಶೈಕ್ಷಣಿಕ ಅಂಕಗಳನ್ನು ಪರಿಗಣಿಸಿ ಶಾರ್ಟ್‌ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆ ಮಾಡುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು SSLC/ PUC/ ITI ಪಾಸಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು. ವಿದ್ಯಾರ್ಹತೆಯನ್ನು ಶೇ 50 ಅಂಕಗಳೊಂದಿಗೆ ಪಾಸಾಗಿರಬೇಕು.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 
* ಪ್ರವರ್ಗ-1, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು 3 ವರ್ಷ
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ
* ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

To Download Official Notification
Related Tags: PUC SSLC

Comments