ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗದಲ್ಲಿ ಖಾಲಿ ಇರುವ ಒಟ್ಟು 1619 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಯಲ್ಲೂ ಆಹ್ವ ಆಹ್ವಾನಿಸಲಾಗಿದೆ

Published by: Basavaraj Halli
|
ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗದಲ್ಲಿ ಖಾಲಿ ಇರುವ ಒಟ್ಟು 1619 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಯಲ್ಲೂ ಆಹ್ವ ಆಹ್ವಾನಿಸಲಾಗಿದೆ
ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗದಲ್ಲಿ ಖಾಲಿ ಇರುವ ಒಟ್ಟು 1619 ಚಾಲಕ ಮತ್ತು ಚಾಲಕ ಕಮ್ ನಿರ್ವಾಹಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ 06 ಜನವರಿ 2020 ರಿಂದ ಆರಂಭವಾಗಿ ದಿನಾಂಕ 05 ಫೆಬ್ರವರಿ 2020 ರವರೆಗೆ ಅವಕಾಶ ನೀಡಲಾಗಿದೆ.
Job Overview
No. of posts
1619
Start Date
6 ಜನವರಿ 2020
End Date
5 ಫೆಬ್ರುವರಿ 2020
Last Payment
5 ಫೆಬ್ರುವರಿ 2020
Employment Type
FULL_TIME
Organization
KPSC Vaani (Website)
Location
ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, KA,
Qualification:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ವಿದ್ಯಾರ್ಹತೆ : ಅಭ್ಯರ್ಥಿಗಳು ಚಾಲಕ ಮತ್ತು ಚಾಲಕ ಕಂ ನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು SSLC ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು
ಚಾಲಕ ಹುದ್ದೆಗೆ- ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಚಾಲ್ತಿಯಲ್ಲಿರುವ ಪ್ರಯಾಣಿಕರ / ಸರಕು ಸಾಗಣೆಗೆ ಭಾರಿ ವಾಹನ ಚಾಲನಾ ಪರವಾನಿಗೆ ಹೊಂದಿ ಎರಡು ವರ್ಷ ಪೂರ್ಣಗೊಂಡಿರಬೇಕು ಜೊತೆಗೆ ಕರ್ನಾಟಕ ಬ್ಯಾಡ್ಜ್ ಹೊಂದಿರಬೇಕು.
-ಚಾಲಕ ಕಂ ನಿರ್ವಾಹಕ ಹುದ್ದೆಗೆ: ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಚಾಲ್ತಿಯಲ್ಲಿರುವ ಪ್ರಯಾಣಿಕರ / ಸರಕು ಸಾಗಣೆಗೆ ಭಾರಿ ವಾಹನ ಚಾಲನಾ ಪರವಾನಗಿ ಹೊಂದಿ ಎರಡು ವರ್ಷ ಪೂರ್ಣಗೊಂಡಿರಬೇಕು ಜೊತೆಗೆ ಕರ್ನಾಟಕ ಬ್ಯಾಡ್ಜ್ ಹೊಂದಿರಬೇಕು ಹಾಗೂ ಚಾಲ್ತಿಯಲ್ಲಿರುವ ಎಂ ವಿ ನಿರ್ವಾಹಕ ಪರವಾನಿಗೆ ಹಾಗೂ ಬ್ಯಾಡ್ಜ್ ಹೊಂದಿರಬೇಕು
Fee:
* ಸಾಮಾನ್ಯ ವರ್ಗ/2ಎ/2ಬಿ/3ಎ/3ಬಿ ವರ್ಗದ ಅಭ್ಯರ್ಥಿಗಳಿಗೆ ₹ 600/-
* ಪ.ಜಾ./ ಪ.ಪಂ./ ವರ್ಗ-1/ ಮಾಜಿ ಸೈನಿಕ/ಅಶಕ್ತ ಮಾಜಿ ಸೈನಿಕರ ಅವಲಂಬಿತ ಅಭ್ಯರ್ಥಿಗಳಿಗೆ ₹ 300/-
Age Limit:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಈ ಕೆಳಕಂಡಂತೆ ವಯೋಮಿತಿ ಹೊಂದಿರತಕ್ಕದ್ದು.
* ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಕನಿಷ್ಠ 24 ವರ್ಷ ಮತ್ತು ಗರಿಷ್ಠ 35 ವರ್ಷ
* ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ ಕನಿಷ್ಠ 24 ವರ್ಷ ಮತ್ತು ಗರಿಷ್ಠ 38 ವರ್ಷ
* ಪ.ಜಾ/ಪ.ಪಂ/ಪ್ರವರ್ಗ-1 ಅಭ್ಯರ್ಥಿಗಳಿಗೆ ಕನಿಷ್ಠ 24 ವರ್ಷ ಮತ್ತು ಗರಿಷ್ಠ 40 ವರ್ಷ
to download official notification
ನೀವು ಪೊಲೀಸ್ ಕಾನ್ಸಟೇಬಲ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.