ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
ಭಾರತದ ಅತಿ ದೊಡ್ಡ ಇಂಧನ ಸಂಸ್ಥೆಯಾದ ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)ನಲ್ಲಿ ಖಾಲಿ ಇರುವ 15 ಕಾರ್ಯನಿರ್ವಾಹಕ (ಕಾರ್ಬನ್ ಕ್ಯಾಪ್ಚರ್ ಮತ್ತು ಬಳಕೆ), ಕಾರ್ಯನಿರ್ವಾಹಕ (ಹೈಡ್ರೋಜನ್), ಮತ್ತು ಕಾರ್ಯನಿರ್ವಾಹಕ (ಇಂಧನ ಶೇಖರಣೆ) ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
- No. of posts
- 15
- Start Date
- 12 ನವೆಂಬರ್ 2024
- End Date
- 22 ನವೆಂಬರ್ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೊನೆಯ ದಿನಾಂಕ 22 ನವೆಂಬರ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 15
ಕಾರ್ಯನಿರ್ವಾಹಕ (ಕಾರ್ಬನ್ ಕ್ಯಾಪ್ಚರ್ ಮತ್ತು ಬಳಕೆ) - 5
ಕಾರ್ಯನಿರ್ವಾಹಕ (ಹೈಡ್ರೋಜನ್) - 5
ಕಾರ್ಯನಿರ್ವಾಹಕ (ಇಂಧನ ಶೇಖರಣೆ) - 5
Qualification:
ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ Ph.D ಪದವಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ 300/-ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
SC/ST/PwBD/ಮಾಜಿ ಸೈನಿಕ ಅಭ್ಯರ್ಥಿಗಳು ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಠ 45 ವರ್ಷ ವಯಸ್ಸನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳಿಗೆ: 03 ವರ್ಷಗಳು
SC/ST ಅಭ್ಯರ್ಥಿಗಳಿಗೆ: 05 ವರ್ಷಗಳು
PwBD ಅಭ್ಯರ್ಥಿಗಳಿಗೆ: 10 ವರ್ಷಗಳು
Comments