ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಇಲ್ಲಿ ಖಾಲಿ ಇರುವ ಸುಮಾರು 2814 ವಿವಿಧ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಇಲ್ಲಿ ಖಾಲಿ  ಇರುವ ಸುಮಾರು 2814 ವಿವಿಧ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ
09 ಡಿಸೆಂಬರ್ 2019 BMTC/KSRTC
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಾಗಲಕೋಟ, ಬೆಳಗಾವಿ, ಚಿಕ್ಕೋಡಿ, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ ನಗರ ಸಾರಿಗೆ, ಧಾರವಾಡ, ಗದಗ, ಹಾವೇರಿ ಮತ್ತು ಉತ್ತರ ಕನ್ನಡ ವಿಭಾಗ ಶಿರಸಿಯಲ್ಲಿ ಖಾಲಿ ಇರುವ ಈ ಕೆಳಕಂಡ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗುತ್ತದೆ ಚಾಲಕ - 2500 ಹುದ್ದೆಗಳು ಚಾಲಕ (ಪಜಾ ಹಿಂಬಾಕಿ) - 55 ಹುದ್ದೆಗಳು ಚಾಲಕ ಕಂ ನಿರ್ವಾಹಕ (ಪಜಾ ಹಿಂಬಾಕಿ) - 259 ಹುದ್ದೆಗಳು ಒಟ್ಟು ಖಾಲಿ ಇರುವ ಹುದ್ದೆಗಳು - 2814 ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗಗಳ ವ್ಯಾಪ್ತಿಯಲ್ಲಿ ಬರುವ ಘಟಕಗಳಲ್ಲಿ ಕಾರ್ಯನಿರ್ವಹಿಸಲು ಇಚ್ಛೆಯುಳ್ಳ ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ದಿನಾಂಕ 10 ಡಿಸೆಂಬರ್ 2019 ರಿಂದ ಸಲ್ಲಿಸಲು ಅವಕಾಶ ನೀಡಲಾಗಿರುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ 08 ಜನವರಿ 2020 ರಂದು (ಸಾಯಂಕಾಲ 5:30) ಕೊನೆಯ ದಿನವಾಗಿರುತ್ತದೆ.
Job Overview
No. of posts
2814
Start Date
10 ಡಿಸೆಂಬರ್ 2019
End Date
8 ಜನವರಿ 2020
Employment Type
FULL_TIME
Organization
KPSC Vaani (Website)
Location
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗಗಳ ವ್ಯಾಪ್ತಿ, KA,
Qualification:
ಚಾಲಕ ಹುದ್ದೆಗೆ : ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು SSLC ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು ಮತ್ತು ಚಾಲ್ತಿ ಇರುವ ಭಾರಿ ಸರಕು ಸಾಗಾಣಿಕೆ ವಾಹನ ಚಾಲನಾ ಪರವಾನಿಗೆ ಜೊತೆಗೆ ಕರ್ನಾಟಕ PSV ಬ್ಯಾಡ್ಜ್ ಹೊಂದಿರಬೇಕು.

ಚಾಲಕ ಕಂ ನಿರ್ವಾಹಕ ಹುದ್ದೆಗಳಿಗೆ : ಅಭ್ಯರ್ಥಿಗಳು SSLC ಅಥವಾ ತತ್ಸಮಾನ ವಿದ್ಯಾರ್ಹತೆ ತೇರ್ಗಡೆಯಾಗಿರಬೇಕು. ಜೊತೆಗೆ ಭಾರಿ ಸರಕು ಸಾಗಾಣಿಕೆ ವಾಹನ ಪರವಾನಿಗೆ ಜೊತೆ ಕರ್ನಾಟಕ PSV ಬ್ಯಾಡ್ಜ್ ಮತ್ತು ಚಾಲ್ತಿ ಇರುವ ನಿರ್ವಾಹಕ ಪರವಾನಿಗೆ ಮತ್ತು ಕರ್ನಾಟಕ ಬ್ಯಾಡ್ಜ್ ಹೊಂದಿರಬೇಕು.
Fee:
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1, ಮಾಜಿ ಸೈನಿಕ ಮತ್ತು ಅಶಕ್ತ ಮಾಜಿ ಸೈನಿಕರ ಅವಲಂಬಿತರಿಗೆ ರೂಪಾಯಿ 300/-
* ವರ್ಗ 2A 2B 3A 3B ಮತ್ತು ಸಾಮಾನ್ಯ ಅಭ್ಯರ್ಥಿಗಳಿಗೆ ರೂಪಾಯಿ 600/- ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 24 ವರ್ಷಗಳು ತುಂಬಿರಬೇಕು ಹಾಗೂ ಗರಿಷ್ಠ ವಯೋಮಿತಿ
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ 1 ಅಭ್ಯರ್ಥಿಗಳಿಗೆ 40 ವರ್ಷಗಳು
* ಪ್ರವರ್ಗ 2A 2B 3A 3B ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷಗಳು ಮತ್ತು
* ಎಲ್ಲ ಸಾಮಾನ್ಯ ಅಭ್ಯರ್ಥಿಗಳಿಗೆ 35 ವರ್ಷಗಳ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
to visit official complete NWKRTC notification
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.