ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (PFRDA) ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಈ ಕುರಿತು ಮಾಹಿತಿ ನಿಮಗಾಗಿ

ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ  (PFRDA) ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಈ ಕುರಿತು ಮಾಹಿತಿ ನಿಮಗಾಗಿ
Published by Yallamma G
25 ಜೂನ್ 2025 Others
Tags: Degree

ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (PFRDA)ದಲ್ಲಿ ಖಾಲಿ ಇರುವ ವಿವಿಧ  ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಒಟ್ಟು 20 ಹುದ್ದೆಗಳ ನೇಮಕಾತಿ ನಡೆಯಲಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 2025/08/06ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.  ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ.

ವಿದ್ಯಾರ್ಹತೆ : 
PFRDA ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ, ಸ್ನಾತಕೋತ್ತರ ಪದವಿ, CA, CS, CMA, ICWA, CFA, LLB, B.Sc, MCA ಪೂರ್ಣಗೊಳಿಸಿರಬೇಕು.

ವಯೋಮಿತಿ:
PFRDA ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 31-07-2025 ರಂತೆ 30 ವರ್ಷಗಳನ್ನು ಹೊಂದಿರಬೇಕು.

ಅರ್ಜಿಶುಲ್ಕ:
SC/ST/PwBD/ಮಹಿಳಾ ಅಭ್ಯರ್ಥಿಗಳಿಗೆ: ಇರುವುದಿಲ್ಲ
ಯುಆರ್/ಸಾಮಾನ್ಯ, ಇಡಬ್ಲ್ಯೂಎಸ್ ಮತ್ತು ಒಬಿಸಿ ಅಭ್ಯರ್ಥಿಗಳಿಗೆ: ₹1000/-
ಪಾವತಿ ವಿಧಾನ: ಆನ್‌ಲೈನ್ ಮೂಲಕ

ವೇತನ ಶ್ರೇಣಿ:
PFRDA ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಮಾಸಿಕ ₹44,500-89,150/- ವೇತನವನ್ನು ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ:
PFRDA ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಆನ್‌ಲೈನ್ ಪರೀಕ್ಷೆ, ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿಸಲ್ಲಿಸುವ ಕ್ರಮಗಳು:
- ಅಧಿಕೃತ ವೆಬ್‌ಸೈಟ್ http://pfrda.org.in/ ಗೆ ಭೇಟಿ ನೀಡಿ
- ನೀವು ಅರ್ಜಿ ಸಲ್ಲಿಸಲಿರುವ PFRDA ನೇಮಕಾತಿ ಅಥವಾ ಉದ್ಯೋಗಗಳಿಗಾಗಿ ಪರಿಶೀಲಿಸಿ.
- ಸಹಾಯಕ ವ್ಯವಸ್ಥಾಪಕ ಹುದ್ದೆಗಳ ಅಧಿಸೂಚನೆಯನ್ನು ತೆರೆಯಿರಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
- ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಎಚ್ಚರಿಕೆಯಿಂದ ಪರಿಶೀಲಿಸಿ.
- ನೀವು ಅರ್ಹರಾಗಿದ್ದರೆ, ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- ಕೊನೆಯ ದಿನಾಂಕದೊಳಗೆ ರೊಳಗೆ ಅರ್ಜಿ ಸಲ್ಲಿಸಿ ಅರ್ಜಿ ನಮೂನೆಯ ಸಂಖ್ಯೆ/ಕೊರಿಯರ್ ಸ್ವೀಕೃತಿ ಸಂಖ್ಯೆಯನ್ನು ಸುರಕ್ಷಿತವಾಗಿಡಬೇಕು.

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 23-06-2025
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06-08-2025
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 06-08-2025

Job Overview
End Date
6 ಆಗಸ್ಟ್ 2025
Employment Type
FULL_TIME
Organization
KPSC Vaani (Website)
Location
KA,
To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.