ರಾಯಚೂರು ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ರಾಯಚೂರು ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
16 ಫೆಬ್ರವರಿ 2023 Others
Tags: PUC SSLC

ರಾಯಚೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ರಾಯಚೂರು ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ, ಬೆರಳಚ್ಚುಗಾರ, ಆದೇಶ ಜಾರಿಕಾರ ಸೇರಿದಂತ್ತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 10/03/2023 ರಾತ್ರಿ 11:59 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ: 33
* ಶೀಘ್ರಲಿಪಿಗಾರ :7
* ಬೆರಳಚ್ಚುಗಾರ : 1  
 *ಆದೇಶ ಜಾರಿಕಾರ : 3
* ಜವಾನ : 22

ಪ್ರಮುಖ ದಿನಾಂಕಗಳು :
- ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ: 09/02/2023
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10/03/2023

Job Overview
No. of posts
33
Start Date
9 ಫೆಬ್ರುವರಿ 2023
End Date
10 ಮಾರ್ಚ್ 2023
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:

ಈ ಹುದ್ದೆಗಳಿಗೆ  ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 
* ಶೀಘ್ರಲಿಪಿಗಾರ, ಬೆರಳಚ್ಚುಗಾರ, ಆದೇಶ ಜಾರಿಕಾರ ಹುದ್ದೆಗಳಿಗೆ ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ಸಾಮರ್ಥ್ಯ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದಮೇಲೆ 1: 5 ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
* ಜವಾನ ಹುದ್ದೆಗಳಿಗೆ  ಎಸ್. ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪಡೆದ ಗರಿಷ್ಠ ಅಂಕಗಳ ಆಧಾರದ ಮೇಲೆ ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
* ಶೀಘ್ರಲಿಪಿಗಾರ, ಬೆರಳಚ್ಚುಗಾರ ಹುದ್ದೆಗಳಿಗೆ - ಪಿ.ಯು.ಸಿ.(12th) ಅಥವಾ ಡಿಪ್ಲೋಮ (diploma) ವಿದ್ಯಾರ್ಹತೆಯನ್ನು ಹೊಂದಿರಬೇಕು.
* ಆದೇಶ ಜಾರಿಕಾರ, ಜವಾನ ಹುದ್ದೆಗಳಿಗೆ -ಎಸ್. ಎಸ್.ಎಲ್.ಸಿ(10th) ವಿದ್ಯಾರ್ಹತೆಯನ್ನು ಹೊಂದಿರಬೇಕು.ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. 

Fee:

* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ರೂ. 200/-
* SC/ ST/ ಪ್ರವರ್ಗ 1 ಮತ್ತು ಅಂಗವಿಕಲ ಅಭ್ಯರ್ಥಿಗಳು ರೂ. 100/ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು 
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

To Download Official Notification
Related Tags: PUC SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.