Loading..!

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸ್ವಚ್ಛ ಭಾರತ ಮಿಷನ್ ಗ್ರಾಮೀಣ ಯೋಜನೆಯಡಿಯಲ್ಲಿ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಈ ಕೆಳಕಂಡ ಹುದ್ದೆಗಳ ನೇಮಕ
Published by: Basavaraj Halli | Date:6 ಜನವರಿ 2020
not found
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸ್ವಚ್ಛ ಭಾರತ ಮಿಷನ್ ಗ್ರಾಮೀಣ ಯೋಜನೆಯಡಿಯಲ್ಲಿ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಈ ಕೆಳಕಂಡ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ಸಮಾಲೋಚಕರನ್ನು ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರೆಯಲಾಗಿದೆ.

ಹುದ್ದೆಗಳ ವಿವರ :
ಮಾನವ ಸಂಪನ್ಮೂಲ ಅಭಿವೃದ್ಧಿ - 03 ಹುದ್ದೆಗಳು
ಮಾಹಿತಿ ಶಿಕ್ಷಣ ಹಾಗೂ ಸಂವಹನ - 03 ಹುದ್ದೆಗಳು
ನೈರ್ಮಲ್ಯ ಹಾಗೂ ಶುಚಿತ್ವ - 02 ಹುದ್ದೆಗಳು
ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆ - 04 ಹುದ್ದೆಗಳು
ಮೇಲ್ವಿಚಾರಣೆ ಹಾಗೂ ಮೌಲ್ಯಮಾಪನ - 07 ಹುದ್ದೆಗಳು
ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ

ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ತುಂಬಿ ವಯಸ್ಸಿನ ದೃಢೀಕರಣ, ವಿದ್ಯಾರ್ಹತೆ, ಅನುಭವ, ಪ್ರಮುಖ ಸಾಮರ್ಥ್ಯಗಳ ಜೊತೆಗೆ "ನಾನು ಈ ಹುದ್ದೆಗೆ ಯಾವ ರೀತಿ ಸೂಕ್ತನಾಗಿದ್ದೇನೆ" ಎಂಬುದರ ಬಗ್ಗೆ ಒಂದು ಪುಟದಲ್ಲಿ ಟಿಪ್ಪಣಿ ಬರೆದು ಅರ್ಜಿಯನ್ನು ಪೋಸ್ಟ್ /ಸ್ಪೀಡ್ ಪೋಸ್ಟ್ /ಕೊರಿಯರ್ ಮುಖಾಂತರ ನೇರವಾಗಿ "ಆಯುಕ್ತರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಎರಡನೇ ಮಹಡಿ, E ಬ್ಲಾಕ್, ಕೆಎಚ್ ಬಿ ಕಾಂಪ್ಲೆಕ್ಸ್, ಕಾವೇರಿ ಭವನ, ಬೆಂಗಳೂರು-560009" ಇವರಿಗೆ ಕಳುಹಿಸಬೇಕು
* ಅರ್ಜಿಯ ಪ್ರತಿಯನ್ನು ದಿನಾಂಕ 18 ಜನವರಿ 2020 ರ ಸಂಜೆ 5:30 ಗಂಟೆಯೊಳಗೆ ಸಲ್ಲಿಸಬೇಕು

ಈ ಹುದ್ದೆಗಳು ಸಂಪೂರ್ಣವಾಗಿ ತಾತ್ಕಾಲಿಕ ಹುದ್ದೆಗಳಾಗಿದ್ದು ಒಂದು ವರ್ಷದ ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲಾಗುವುದು.
No. of posts:  19
PDO ಮತ್ತು GPS ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments