ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದಲ್ಲಿ ಖಾಲಿ ಇರುವ 2000 ಹುದ್ದೆಗಳಿಗೆ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 27/09/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತೀಯ ಸ್ಟೇಟ್ ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯ ಪ್ರಕಾರ ಪ್ರೊಬೇಷನರಿ ಹುದ್ದೆಗಳು.
* ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದಲ್ಲಿ ಖಾಲಿ ಇರುವ 2000 ಹುದ್ದೆಗಳ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು 27-09-2023 ವರೆಗೆ ನಿಗದಿಪಡಿಸಲಾಗಿತ್ತು, ಇದೀಗ ಅರ್ಜಿ ಸಲ್ಲಿಸುವ ದಿನಾಂಕವನ್ನು 03-10-2023 ವರೆಗೆ ವಿಸ್ತರಿಸಲಾಗಿದೆ.
- ಈ ಕುರಿತು ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
- No. of posts
- 2000
- Start Date
- 8 ಸೆಪ್ಟೆಂಬರ್ 2023
- End Date
- 3 ಅಕ್ಟೋಬರ್ 2023
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ ಲೈನ್ ಪರೀಕ್ಷೆ ಮತ್ತು ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ ಯಾವುದೇ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಸಾಮಾನ್ಯ ಮತ್ತು OBC ಅಭ್ಯರ್ಥಿಗಳು ರೂ 750/- ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಬೇಕು.
SC/ST/ ಮಹಿಳಾ ಇತರ ಅಭ್ಯರ್ಥಿಗಳಿಗೆ ವಿನಾಯಿತಿ ಇರಲಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ದಿನಾಂಕ 1-04-2023 ಅನ್ವಯವಾಗುವಂತೆ ಕನಿಷ್ಠ 21 ವರ್ಷ ಹಾಗೂ ಗರಿಷ್ಠ 30 ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ವಯೋಮಿತಿ ಸಡಿಲಿಕೆ :
OBC ಅಭ್ಯರ್ಥಿಗಳಿಗೆ 3 ವರ್ಷ
SC/ ST ಅಭ್ಯರ್ಥಿಗಳಿಗೆ 5 ವರ್ಷ
PWD ಅಭ್ಯರ್ಥಿಗಳಿಗೆ 10 ವರ್ಷ
Comments