ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ದೇಶದ ಪ್ರಮುಖ ಬ್ಯಾಂಕುಗಳಲ್ಲಿ ಒಂದಾದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದಲ್ಲಿ ಖಾಲಿ ಇರುವ 58 ಡೆಪ್ಯುಟಿ ವೈಸ್ ಪ್ರೆಸಿಡೆಂಟ್, ಅಸಿಸ್ಟೆಂಟ್ ವೈಸ್ ಪ್ರೆಸಿಡೆಂಟ್, ಸೀನಿಯರ್ ಸ್ಪೆಷಲ್ ಎಕ್ಸಿ ಕ್ಯುಟಿವ್ ಸೇರಿದಂತೆ ಸ್ಪೆಷಲಿಸ್ಟ್ ಕೇಡರ್ ಆಫೀಸರ್ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಆಸಕ್ತ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 24 ಸೆಪ್ಟೆಂಬರ್ 2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
- No. of posts
- 58
- Start Date
- 5 ಸೆಪ್ಟೆಂಬರ್ 2024
- End Date
- 24 ಸೆಪ್ಟೆಂಬರ್ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ BE. /B. Tech / MCA/ M. Tech/ M.Sc/ MBA ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ EWS/ OBC ಅಭ್ಯರ್ಥಿಗಳು 750/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲ್ಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 27 ವರ್ಷ ಹಾಗೂ ಗರಿಷ್ಠ 45 ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.