ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ದೇಶದ ಪ್ರಮುಖ ಬ್ಯಾಂಕುಗಳಲ್ಲಿ ಒಂದಾದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದಲ್ಲಿ ಖಾಲಿ ಇರುವ 42 ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಆಸಕ್ತ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಶುಲ್ಕ :
- ಸಾಮಾನ್ಯ/ಇಡಬ್ಲ್ಯೂಎಸ್/ಒಬಿಸಿ ಅಭ್ಯರ್ಥಿಗಳಿಗೆ: ರೂ. 750/- (ಹಿಂತಿರುಗಿಸಲಾಗದ ಶುಲ್ಕ)
- ಎಸಿಸಿ/ಎಸ್ಟಿ/ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ.
ಮುಖ್ಯ ದಿನಾಂಕಗಳು :
ಆನ್‌ಲೈನ್ ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ : 01-02-2025
ಆನ್‌ಲೈನ್ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 24-02-2025
ಅರ್ಹತೆ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ B.E. / B.Tech / M.Tech/ MA/ M.Sc/ MCA (Relevant Field) ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
ವಯೋಮಿತಿ:
ಮ್ಯಾನೇಜರ್ (ಡೇಟಾ ಸೈನ್ಟಿಸ್ಟ್) : ಕನಿಷ್ಟ 26 ಹಾಗೂ ಗರಿಷ್ಟ 36 ವರ್ಷ
ಉಪಮ್ಯಾನೇಜರ್ (ಡೇಟಾ ಸೈನ್ಟಿಸ್ಟ್) : ಕನಿಷ್ಟ 24 ಹಾಗೂ ಗರಿಷ್ಟ 32 ವರ್ಷ
ವಯೋಮಿತಿಯಲ್ಲಿ ಸಡಿಲಿಕೆ: ನಿಯಮಗಳ ಪ್ರಕಾರ ಅನ್ವಯವಾಗುತ್ತದೆ.
ಆಯ್ಕೆ ಪ್ರಕ್ರಿಯೆ :
ಶರ್ಟ್ ಲಿಸ್ಟ್ ಮತ್ತು ಸಂದರ್ಶನದ ಮೂಲಕ
ಮಾಸಿಕ ವೇತನ :
Manager (Data Scientist) : Rs (85920-2680/5-99320-2980/2-105280)
Dy. Manager (Data Scientist) : Rs (64820-2340/1-67160-2680/10-93960)
ಹುದ್ದೆಗಳ ವಿವರ : 42
Manager (Data Scientist) : 13
Dy. Manager (Data Scientist) : 29
Comments