ಶಿಪ್ಪಿಂಗ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

Published by: Yallamma G
|
ಶಿಪ್ಪಿಂಗ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಶಿಪ್ಪಿಂಗ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ಒಟ್ಟು 46 ಮ್ಯಾನೆಜ್ ಮೆಂಟ್, ಫೈನಾನ್ಸ್, ಹೆಚ್ ಆರ್, ಲಾ, ಸಿವಿಲ್ ಇಂಜಿನಿಯರ್, ಸಿಎಸ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು 3 ವರ್ಷದ ಅವಧಿಯ ವರೆಗೆ ಗುತ್ತಿಗೆ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ, ಕಾರ್ಯ ಕ್ಷಮತೆಯ ಆಧಾರದ ಮೇಲೆ ಅವಧಿಯನ್ನು ವಿಸ್ತರಿಸಲಾಗುವುದು. ಅರ್ಜಿ ಸಲ್ಲಿಕೆಯ ದಿನಾಂಕ 16 ಜುಲೈ 2022 ರಿಂದ ಆರಂಭಗೊಳ್ಳಲಿದ್ದು ದಿನಾಂಕ 16 ಆಗಸ್ಟ್ 2022ಕ್ಕೆ ಕೊನೆಗೊಳ್ಳಲಿದೆ. ಈ ಹುದ್ದೆಗಳಿಗೆ ಭಾರತದ ಪ್ರಜೆಗಳು ಮಾತ್ರ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ : 46 
* ಮ್ಯಾನೆಜ್ ಮೆಂಟ್ : 17
* ಫೈನಾನ್ಸ್ : 10
* ಹೆಚ್ ಆರ್ : 10
* ಲಾ : 5
* ಫೈರ್ ಅಂಡ್ ಸೆಕ್ಯೂರಿಟಿ : 2
* ಸಿವಿಲ್ ಇಂಜಿನಿಯರ್ : 1
* ಸಿ ಎಸ್ : 1

Job Overview
No. of posts
46
Start Date
16 ಜುಲೈ 2022
End Date
16 ಆಗಸ್ಟ್ 2022
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ಲೈನ್ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು MBA/ Diploma/ MMS/ Low/ BE/ B.Tech/ Civil Engineering/ ಸ್ನಾತಕೋತ್ತರ ಪದವಿ/ ಪದವಿ( minimum of 60% marks)ಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಅರ್ಹತೆಯ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ರೂ 500/- 
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಂಗವಿಕಲ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ 100/- ಶುಲ್ಕ ನಿಗದಿಪಡಿಸಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಗರಿಷ್ಠ 27 ವರ್ಷಗಳ ವಯೋಮಿತಿಯನ್ನು ಮೀರಿರಬಾರದು 
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ  3 ವರ್ಷಗಳು ಹಾಗೂ 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳು, 
- PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.

To Download Official Notification

Comments