ಶಿವಮೊಗ್ಗ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ | SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಶಿವಮೊಗ್ಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಶಿವಮೊಗ್ಗ ಘಟಕದಲ್ಲಿ ಖಾಲಿ ಇರುವ 33 ಪ್ರೋಸೆಸ್ ಜಾರಿಕರ ಮತ್ತು ಜವಾನ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 16/01/2024 ರಾತ್ರಿ 11:59 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ಅರ್ಜಿಯನ್ನು ಸಲ್ಲಿಸಬೇಕು.
ಪ್ರಮುಖ ದಿನಾಂಕಗಳು :
- ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ: 15/12/2023
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16/01/2024
- ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 17/01/2024
ಹುದ್ದೆಗಳ ವಿವರ : 33
ಪ್ರೋಸೆಸ್ ಜಾರಿಕರ : 5
ಜವಾನ : 28
- No. of posts
- 33
- Start Date
- 15 ಡಿಸೆಂಬರ್ 2023
- End Date
- 16 ಜನವರಿ 2024
- Last Payment
- 17 ಜನವರಿ 2024
- Employment Type
- FULL_TIME
- Organization
- KPSC Vaani (Website)
- Location
- ಶಿವಮೊಗ್ಗ ಜಿಲ್ಲಾ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಈ ಕೆಳಗಿನಂತೆ ಆಯ್ಕೆ ಮಾಡಿ ಕೊಳ್ಳಲಾಗುತ್ತದೆ.
* ಪ್ರೋಸೆಸ್ ಜಾರಿಕಾರ ಹುದ್ದೆಗಳಿಗೆ ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ ಒಂದು ಹುದ್ದೆಗೆ 25 ಅಭ್ಯರ್ಥಿಗಳಂತೆ (1:25 ರ ಅನುಪಾತದಲ್ಲಿ) ಅತೀ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಪ್ರಕಟಿಸಿರುವ ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಸಂದರ್ಶನವು 10 ಅಂಕಗಳನ್ನು ಒಳಗೊಂಡಿರುತ್ತದೆ.
* ಜವಾನ ಹುದ್ದೆಗಳಿಗೆ ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ ಒಂದು ಹುದ್ದೆಗೆ 10 ಅಭ್ಯರ್ಥಿಗಳಂತೆ (1:10 ರ ಅನುಪಾತದಲ್ಲಿ) ಅತೀ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಪ್ರಕಟಿಸಿರುವ ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಸಂದರ್ಶನವು 10 ಅಂಕಗಳನ್ನು ಒಳಗೊಂಡಿರುತ್ತದೆ.
Qualification:
Fee:
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ಪಾವತಿಸಬೇಕು.
* ಸಾಮಾನ್ಯ ಅಭ್ಯರ್ಥಿಗಳಿಗೆ : 200/-
* OBC ಅಭ್ಯರ್ಥಿಗಳಿಗೆ : 100/-
* ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ, ಅಂಗವಿಕಲ ಮತ್ತು ಪ್ರವರ್ಗ 1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ಇರುತ್ತದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.