ಶ್ರೀ ಬಸವೇಶ್ವರ ಸಹಕಾರಿ ಬ್ಯಾಂಕ್ ನಿ., ಬಾಗಲಕೋಟದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಪದವಿ ಪಾಸಾದವರಿಂದ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಶ್ರೀ ಬಸವೇಶ್ವರ ಸಹಕಾರಿ ಬ್ಯಾಂಕ್ ನಿ., ಬಾಗಲಕೋಟದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಪದವಿ ಪಾಸಾದವರಿಂದ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
16 ಜನವರಿ 2023 Others
Tags: Degree SSLC

ಶ್ರೀ ಬಸವೇಶ್ವರ ಸಹಕಾರಿ ಬ್ಯಾಂಕ್ ನಿ., ಬಾಗಲಕೋಟದಲ್ಲಿ ಖಾಲಿ ಇರುವ ಕಿರಿಯ ಸಹಾಯಕರು ಮತ್ತು ಸಿಪಾಯಿ 35 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 31/01/2023 ರೊಳಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. 

 ಅರ್ಜಿ ಸಲ್ಲಿಸುವ ವಿಳಾಸ :
ಸದಸ್ಯ ಕಾರ್ಯದರ್ಶಿ ಸಿಬ್ಬಂದಿ ನೇಮಕಾತಿ ಸಮಿತಿ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ,
ಶ್ರೀ ಬಸವೇಶ್ವರ ಸಹಕಾರಿ ಬ್ಯಾಂಕ್ ನೀ., ಬಾಗಲಕೋಟ,
ಬಸವೇಶ್ವರ ಬ್ಯಾಂಕ್ ಸರ್ಕಲ್, ಸೆಕ್ಟರ್ ನಂ.25 ನವನಗರ, ಬಾಗಲಕೋಟ-587103 

ಹುದ್ದೆಗಳ ವಿವರ : 35
- ಕಿರಿಯ ಸಹಾಯಕರು : 25
- ಸಿಪಾಯಿ : 10

Job Overview
No. of posts
35
Start Date
16 ಜನವರಿ 2023
End Date
31 ಜನವರಿ 2023
Employment Type
FULL_TIME
Organization
KPSC Vaani (Website)
Location
ಬಾಗಲಕೋಟ ಜಿಲ್ಲಾ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಿ ಪರೀಕ್ಷೆಯಲ್ಲಿ ಗಳಿಸಿದ ಶೇಕಡಾವಾರು ಅಂಕಗಳ ಆಧಾರದ ಮೇಲೆ 1:5ರ ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ಮಾಡುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು SSLC & ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ಸಂಸ್ಥೆ/ ವಿಶ್ವ ವಿದ್ಯಾಲಯದಿಂದ ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು.
* ಜೊತೆಗೆ ಕಂಪ್ಯೂಟರ ಜ್ಞಾನವನ್ನು ಹೊಂದಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗಿರುತ್ತದೆ.
* ಕಿರಿಯ ಸಹಾಯಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 1000/ -ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕು. ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ/ಪ್ರವರ್ಗ 1 ಕ್ಕೆ ಸೇರಿದ ಅಭ್ಯರ್ಥಿಗಳು 500 / -ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕು.
* ಸಿಪಾಯಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 500/ -ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕು. ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ/ಪ್ರವರ್ಗ 1 ಕ್ಕೆ ಸೇರಿದ ಅಭ್ಯರ್ಥಿಗಳು 250 / -ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕು.
Shree Basaveshwara Sahakari Bank NYT., Bagalkot, A/C SS-568 ಹೆಸರಿನಲ್ಲಿ ಬಾಗಲಕೋಟದಲ್ಲಿ ಸಂದಾಯವಾಗುವಂತೆ ಡಿಮಾಂಡ್ ಡ್ರಾಪ್ಟ್ ಪಡೆದು ಅರ್ಜಿಯ ಜೊತೆಗೆಲಗತ್ತಿಸಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು 
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳು ವಯೋಮಿತಿಯ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.

To Download Official Notification
Related Tags: Degree SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.