ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಂಘದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ
Published by: Surekha Halli | Date:24 ಎಪ್ರಿಲ್ 2021
ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಂಘದಲ್ಲಿ ಖಾಲಿ ಇರುವ ಕಿರಿಯ ಸಹಾಯಕ ಕಂ ಮಾರಾಟ ಗುಮಾಸ್ತ ಹುದ್ದೆಗಳಿಗೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಸಂಘವು ಪೂರೈಸುವ ಮೂಲ ಅರ್ಜಿಯೊಂದಿಗೆ ಪೂರಕ ದಾಖಲೆಗಳ ನಕಲುಗಳನ್ನು ಸ್ವಯಂ ದೃಡೀಕರಿಸಿ, ದಿನಾಂಕ 24-05-2021 ರೊಳಗಾಗಿ ಸಂಘದ ಕಚೇರಿಗೆ ತಲುಪಿಸತಕ್ಕದ್ದು.
* ಹುದ್ದೆಯ ವಿವರ :
- ಕಿರಿಯ ಸಹಾಯಕ ಕಂ ಮಾರಾಟ ಗುಮಾಸ್ತ - 05
ಅರ್ಜಿ ಸಲ್ಲಿಸುವ ವಿಧಾನ :
- ಸಂಘದ ಕೇಂದ್ರ ಕಚೇರಿಯಲ್ಲಿ ಕೆಲಸದ ವೇಳೆಯಲ್ಲಿ ಅರ್ಜಿಗಳನ್ನು ವಿತರಿಸಲಾಗುವುದು. ಅರ್ಜಿ ಶುಲ್ಕ ರೂ 1000/- ಪಾವತಿ ಮಾಡಿ ಅರ್ಜಿಯನ್ನು ಪಡೆಯಬಹುದು. ಈ ಹಣವನ್ನು ಯಾವುದೇ ಸಂದರ್ಭದಲ್ಲಿ ಹಿಂದಿರುಗಿಸಲಾಗುವುದಿಲ್ಲ.
- ಸಂಘದಿಂದ ಪೂರೈಸಿದ ಮೂಲ ಅರ್ಜಿಯಲ್ಲಿ ಭರ್ತಿ ಮಾಡಿ ಅರ್ಜಿಯೊಂದಿಗೆ ಪೂರಕ ದಾಖಲೆಗಳ ನಕಲುಗಳನ್ನು ಸ್ವಯಂ ದೃಢೀಕರಿಸಿ "ಸದಸ್ಯ ಕಾರ್ಯದರ್ಶಿ, ಸಿಬ್ಬಂದಿ ನೇಮಕಾತಿ ಸಮಿತಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘ ನಿ. ಸರ್ಜಾಪುರ - 562125, ಆನೇಕಲ್ ತಾಲ್ಲೂಕು, ಬೆಂಗಳೂರು ನಗರ ಜಿಲ್ಲೆ" ಇವರಿಗೆ ದಿನಾಂಕ : 24-05-2021 ರಂದು ಸಂಜೆ 5:00 ಗಂಟೆ ಒಳಗಾಗಿ ಖುದ್ದಾಗಿ ಸಲ್ಲಿಸತಕ್ಕದ್ದು.
No. of posts: 5
Comments