ಭಾರತೀಯ ರೈಲ್ವೆ ಇಲಾಖೆಯ ಆಗ್ನೇಯ ಮಧ್ಯ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ 835 ಹುದ್ದೆಗಳ ನೇಮಕ | ಕೂಡಲೇ ಅರ್ಜಿ ಸಲ್ಲಿಸಿ

ಭಾರತೀಯ ರೈಲ್ವೆ ಸಚಿವಾಲಯದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆಗ್ನೇಯ ಮಧ್ಯ ರೈಲ್ವೆ ವಿಭಾಗದಲ್ಲಿ ಪ್ರಸ್ತುತ ಖಾಲಿ 835 ಇರುವ ಫಿಟ್ಟರ್, ವೆಲ್ಡ್ರ್, ಟರ್ನರ್, ಮಷಿನಿಸ್ಟ್, ಎಲೆಕ್ಟ್ರಿಷನ್, ಸ್ಟೆನೋಗ್ರಾಫರ್, ಪೇಂಟರ್, ಕಾರ್ ಪೇಂಟರ್ ಮತ್ತು ಎಲೆಕ್ಟ್ರಾನಿಕ್ ಮೆಕ್ಯಾನಿಕ್ಸ್ ಸೇರಿದಂತೆ ವಿವಿಧ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ವಿದ್ಯಾರ್ಹತೆ :
SSLC, ITI ವಿದ್ಯಾರ್ಹತೆಯನ್ನು ಕನಿಷ್ಠ 50% ಅಂಕಗಳೊಂದಿಗೆ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಪಾಸಾಗಿರಬೇಕು.
ವಯೋಮಿತಿ :
ಕನಿಷ್ಠ ವಯೋಮಿತಿ : 15 ವರ್ಷ
ಗರಿಷ್ಠ ವಯೋಮಿತಿ : 24 ವರ್ಷ
ವಯೋಮಿತಿ ಸಡಿಲಿಕೆ :
OBC ಅಭ್ಯರ್ಥಿಗಳಿಗೆ : 3 ವರ್ಷ
SC/ST ಅಭ್ಯರ್ಥಿಗಳಿಗೆ : 5 ವರ್ಷ
PEBD ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ : 10 ವರ್ಷ
ಆಯ್ಕೆ :
ವೈದ್ಯಕೀಯ ಪರೀಕ್ಷೆ, ಮತ್ತು ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ನೇಮಕ ಮಾಡಿಕೊಳ್ಳಗುತ್ತದೆ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ : 25-02-2025
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 25-03-2025
Comments