Loading..!

ಎಸ್‌ಎಸ್‌ಸಿ(SSC) ನೇಮಕಾತಿ 2019: 10000 ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
| Date:15 ಜೂನ್ 2019
not found
SSC Recruitment 2019:

ಎಸ್‌ಎಸ್‌ಸಿ(SSC) ನೇಮಕಾತಿ 2019: 10000 ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್‌ಎಸ್‌ಸಿ) ನೇಮಕಾತಿ 10000ಕ್ಕೂ ಅಧಿಕ ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಅನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಮೇ 22,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಶೈಕ್ಷಣಿಕ ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಮೆಟ್ರಿಕ್ಯುಲೇಷನ್(SSLC) ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌ /ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:
ಕನಿಷ್ಟ 18 ರಿಂದ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:
ಈ ಹುದ್ದೆಗಳಿಗೆ ಅಯ್ಕೆಯಾದ ಅಭ್ಯರ್ಥಿಗಳಿಗೆ 5,200/- ರಿಂದ 20,200/- ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:
ಅರ್ಜಿದಾರರು 100/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಮಾಜಿ ಸೈನಿಕ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಸುವುದು ಹೇಗೆ:
ಈ ಹುದ್ದೆಗಳ ಬಗೆಗೆ ತಿಳಿಯಲು ಮೊದಲು ಅಧಿಕೃತ ವೆಬ್‌ಸೈಟ್‌ https://ssc.nic.in/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಅನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಮೇ 22,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
No. of posts:  10000

Comments