ಸಿಬ್ಬಂದಿ ಆಯೋಗ ನೇಮಕಾತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಸಿಬ್ಬಂದಿ ಆಯೋಗ ನೇಮಕಾತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Savita Halli
22 ಆಗಸ್ಟ್ 2022 SSC State Important

ಕೇಂದ್ರ ಸರ್ಕಾರದ, ಸಿಬ್ಬಂದಿ ನೇಮಕಾತಿ ಆಯೋಗದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ  ಸ್ಟೆನೋಗ್ರಾಫರ್‌ ಗ್ರೇಡ್ ಸಿ ( ಗ್ರೂಪ್ ಬಿ, ನಾನ್ ಗೆಜೆಟೆಡ್ ) ಮತ್ತು ಸ್ಟೆನೋಗ್ರಾಫರ್ ಗ್ರೇಡ್ ಡಿ ( ಗ್ರೂಪ್ ಸಿ ) ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 05/09/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

Job Overview
Start Date
22 ಆಗಸ್ಟ್ 2022
End Date
5 ಸೆಪ್ಟೆಂಬರ್ 2022
Last Payment
6 ಸೆಪ್ಟೆಂಬರ್ 2022
Employment Type
FULL_TIME
Organization
KPSC Vaani (Website)
Location
ಭಾರತದಾಧ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಕಂಪ್ಯೂಟರ್ ಬೇಸ್ಡ್ ಪರೀಕ್ಷೆಯನ್ನು ನಡೆಸಲಾಗುವುದು. ಈ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಅಭ್ಯರ್ಥಿಗಳ ಜೇಷ್ಠತಾ ಪಟ್ಟಿಯನ್ನು ತಯಾರಿಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯ/ ಸಂಸ್ಥೆಯಿಂದ 12 ನೇ ತರಗತಿ/ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
- ಇಂಗ್ಲಿಷ್ ಹಾಗೂ ಹಿಂದಿ ಟೈಪಿಂಗ್ ತಿಳಿದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು.

Fee:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಸಾಮಾನ್ಯ ಅಭ್ಯರ್ಥಿಗಳು ರೂ. 100 / -ಗಳ ಅರ್ಜಿ ಶುಲ್ಕವನ್ನು ಪಾವತಿಸಬೇಕು.
- SC/ST, ಮಹಿಳಾ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 2022 ರ ಜನವರಿ 1 ಕ್ಕೆ ಅನ್ವಯಿಸುವಂತೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ ವಯೋಮಿತಿ ಸ್ಟೆನೋಗ್ರಾಫರ್ ಗ್ರೇಡ್ ಸಿ ಹುದ್ದೆ ಅಭ್ಯರ್ಥಿಗಳಿಗೆ 30 ವರ್ಷ ಸ್ಟೆನೋಗ್ರಾಫರ್ ಗ್ರೇಡ್ ಡಿ ಹುದ್ದೆಯ ಅಭ್ಯರ್ಥಿಗಳಿಗೆ ಗರಿಷ್ಠ 27 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
* ಎಸ್‌ಸಿ , ಎಸ್‌ಟಿ , ಅಭ್ಯರ್ಥಿಗಳಿಗೆ 5 ವರ್ಷಗಳು,
* ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ,
* ಅಂಗವಿಕಲ ಅಭ್ಯರ್ಥಿಗಳಿಗೆ 10-15 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.