ತುಮಕೂರು ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
| Date:5 ಜನವರಿ 2019
ತುಮಕೂರು ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳಲ್ಲಿ 2018-19ನೇ ಸಾಲಿಗೆ 128 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಪರಿಷ್ಕೃತ ನಿಯಮಗಳಂತೆ ನೇರ ನೇಮಕಾತಿ ಮಾಡಲು ಪ್ರಾಧಿಕಾರವು ನಿಗದಿಪಡಿಸಿರುವ ನಮೂನೆಯಲ್ಲಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್ ಮೂಲಕ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಆನ್ಲೈನ್ ಅಂತರ್ಜಾಲ ಮುಖಾಂತರ ಮಾತ್ರ ಸಲ್ಲಿಸತಕ್ಕದ್ದು ಅರ್ಜಿಯನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ ಖುದ್ದಾಗಿ ಅಥವ ಅಂಚೆ ಮೂಲಕ ಸಲ್ಲಿಸುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
** ಆಯ್ಕೆಗೊಂಡ ಅಭ್ಯರ್ಥಿಗಳು 5 ವರ್ಷಗಳವರೆಗೆ ಕಡ್ಡಾಯವಾಗಿ ಈ ಜಿಲ್ಲೆಯಲ್ಲಿ ಸೇವೆ ಸಲ್ಲಿಸಬೇಕು, ಆಯ್ಕೆಗೊಂಡ ಅಭ್ಯರ್ಥಿಗಳ ಮೂಲ ಅಂಕಪಟ್ಟಿ ಹಾಗೂ ಇತರೆ ದಾಖಲಾತಿಗಳು ನೇಮಕಾತಿ ಪ್ರಾಧಿಕಾರದ ವಶದಲ್ಲಿರುತ್ತದೆ. ಅಭ್ಯರ್ಥಿಗಳು ನೇಮಕಗೊಂಡ ಐದು ವರ್ಷಗಳ ಒಳಗೆ ಯಾವುದೇ ಕಾರಣದಿಂದಾಗಿ ಈ ಜಿಲ್ಲೆಯಿಂದ ಗ್ರಾಮ ಲೆಕ್ಕಿಗರ ಹುದ್ದೆಗೆ ರಾಜೀನಾಮೆ ಅಥವಾ ಈ ಜಿಲ್ಲೆಯಲ್ಲಿ ನೇಮಕಾತಿ ಹೊಂದಿರುವ ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ಬಿಟ್ಟು ಈ ಜಿಲ್ಲೆಯಿಂದ ಬೇರೆ ಜಿಲ್ಲೆಗೆ ಹೋಗಬೇಕಾದಲ್ಲಿ ಒಂದು ಲಕ್ಷ ರೂಪಾಯಿಗಳ ದಂಡವನ್ನು ಸಕ್ಷಮ ಪ್ರಾಧಿಕಾರಕ್ಕೆ ಪಾವತಿಸಿದ ನಂತರ ಸೇವೆಯಿಂದ ಬಿಡುಗಡೆಗೊಳಿಸಿ ಮೂಲ ದಾಖಲಾತಿಗಳನ್ನು ಪಡೆದುಕೊಳ್ಳಬಹುದಾಗಿದೆ.
ಸಹಾಯವಾಣಿ ಸಂಖ್ಯೆ : 08162278718

No. of posts: 128
Comments