ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಖಾಲಿ ಇರುವ ತಾಂತ್ರಿಕ ಅಧಿಕಾರಿ ಹುದ್ದೆಯನ್ನು ಭರ್ತಿ ಮಾಡಲು ನೇರ ಸಂದರ್ಶನ.
Published by: Yallamma G | Date:4 ಮಾರ್ಚ್ 2022
ಕೃಷಿ ವಿಶ್ವವಿದ್ಯಾಲಯ ಧಾರವಾಡ, ಪ್ರಾದೇಶಿಕ ಕೃಷಿ ಸಂಶೋಧನಾ ಕೇಂದ್ರ ವಿಜಯಪುರದಲ್ಲಿ "ಗ್ರಾಮೀಣ ಕೃಷಿ ಮೌಸಮ್ ಸೇವಾ (GKMS)" ಎಂಬ ಯೋಜನಾ ಅಡಿಯಲ್ಲಿ ಖಾಲಿ ಇರುವ ತಾಂತ್ರಿಕ ಅಧಿಕಾರಿ ಹುದ್ದೆಯನ್ನು ತಾತ್ಕಾಲಿಕವಾಗಿ ಒಂದು ವರ್ಷದವರೆಗೆ ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ 09/03/2022 ರಂದು ಮಧ್ಯಾಹ್ನ 2:00 ಘಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಪಾಲ್ಗೊಳ್ಳಬಹುದು.
ಸಂದರ್ಶನ ನಡೆಯುವ ಸ್ಥಳ:
ಸಹ ಸಂಶೋಧನಾ ನಿರ್ದೇಶಕರು,
ಪ್ರಾದೇಶಿಕ ಕೃಷಿ ಸಂಶೋಧನಾ ಕೇಂದ್ರ,
ವಿಜಯಪುರ.
No. of posts: 1
Comments