ಕೇಂದ್ರ ಲೋಕಸೇವಾ ಆಯೋಗ(UPSC)ದಿಂದ ಖಾಲಿ ಇರುವ 1129 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
ಕೇಂದ್ರ ಲೋಕಸೇವಾ ಆಯೋಗ (UPSC) ದಲ್ಲಿ ಖಾಲಿ ಇರುವ 1129 ನಾಗರಿಕ ಸೇವೆಗಳ ಪರೀಕ್ಷೆ ಮತ್ತು ಭಾರತೀಯ ಅರಣ್ಯ ಸೇವೆ ಪರೀಕ್ಷೆ(IFS) ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದ್ದು, ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದ.
ಕೇಂದ್ರ ಲೋಕಸೇವಾ ಆಯೋಗ (UPSC) ವು ಅರ್ಜಿ ಸಲ್ಲಿಸಲು ಇದ್ದ ಅಂತಿಮ ದಿನಾಂಕವನ್ನು 11-02-2025 ರಿಂದ 18-02-2025 ರ ವರೆಗೆ ವಿಸ್ತರಿಸಲಾಗಿದೆ.
ಕೇಂದ್ರ ಲೋಕಸೇವಾ ಆಯೋಗ (UPSC) ವು 979 ನಾಗರಿಕ ಸೇವೆಗಳ ಪರೀಕ್ಷೆ ಮತ್ತು 150 ಭಾರತೀಯ ಅರಣ್ಯ ಸೇವೆ ಪರೀಕ್ಷೆ(IFS) ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು ಇದ್ದ ಅಂತಿಮ ದಿನಾಂಕವನ್ನು ಇದೀಗ ಎರಡನೇ ಬಾರಿಗೆ 21-02-2025 ರ ವರೆಗೆ ವಿಸ್ತರಿಸಲಾಗಿದೆ.
- No. of posts
- 1129
- Start Date
- 23 ಜನವರಿ 2025
- End Date
- 21 ಫೆಬ್ರುವರಿ 2025
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಪೂರ್ವ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21-ಫೆಬ್ರುವರಿ-2025 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 1129
ನಾಗರಿಕ ಸೇವೆಗಳ ಪರೀಕ್ಷೆ - 979
ಭಾರತೀಯ ಅರಣ್ಯ ಸೇವೆ ಪರೀಕ್ಷೆ - 150
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ಯಾವುದೇ ಪದವಿ ವಿದ್ಯಾರ್ಹತೆಯನ್ನು ಯಾವುದೇ ಅಂಗೀಕೃತ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Fee:
ಇತರ ಎಲ್ಲ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ ರೂ.100/- ಪಾವತಿಸಬೇಕು.
* SC, ST, PWD, ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕದಲ್ಲಿ ವಿನಾಯಿತಿ ನೀಡಲಾಗಿದೆ.
Age Limit:
ಕೇಂದ್ರ ಲೋಕಸೇವಾ ಆಯೋಗ ನೇಮಕಾತಿ ಅಧಿಸೂಚನೆಯ ಪ್ರಕಾರ,ಅಭ್ಯರ್ಥಿಯು ಕನಿಷ್ಠ 21 ವರ್ಷಗಳು ಮತ್ತು ಗರಿಷ್ಠ 32 ವರ್ಷಗಳನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳಿಗೆ: 03 ವರ್ಷಗಳು
SC/ST ಅಭ್ಯರ್ಥಿಗಳಿಗೆ: 05 ವರ್ಷಗಳು
PwBD ಅಭ್ಯರ್ಥಿಗಳಿಗೆ: 10 ವರ್ಷಗಳು
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.