ಕೇಂದ್ರ ಲೋಕಸೇವಾ ಆಯೋಗ(UPSC)ದಿಂದ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಲೋಕಸೇವಾ ಆಯೋಗ (UPSC) ಸಹಾಯಕ ಪ್ರಾಧ್ಯಾಪಕರ 36 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, 27 ಮಾರ್ಚ್ 2025 ರೊಳಗೆ ಅರ್ಜಿ ಸಲ್ಲಿಸಬಹುದು.
ಹುದ್ದೆಯ ವಿವರಗಳು :
- ಹುದ್ದೆಯ ಹೆಸರು : ಸಹಾಯಕ ಪ್ರಾಧ್ಯಾಪಕ
- ಒಟ್ಟು ಹುದ್ದೆಗಳು : 36
ವಿದ್ಯಾರ್ಹತೆ :
- ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಪದವಿ, ಸ್ನಾತಕೋತ್ತರ ಪದವಿ, ಎಂ.ಫಿಲ್ ಅಥವಾ ಪಿಎಚ್‌ಡಿ ಪೂರ್ಣಗೊಳಿಸಿರಬೇಕು.
ವಯೋಮಿತಿ :
ಅಭ್ಯರ್ಥಿಗಳ ಗರಿಷ್ಠ ವಯಸ್ಸು 40 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ ಕೆಳಗಿನಂತೆ:
- ಒಬಿಸಿ: 3 ವರ್ಷಗಳು
- ಎಸ್‌ಸಿ/ಎಸ್‌ಟಿ: 5 ವರ್ಷಗಳು
- ಪಿಡಬ್ಲ್ಯೂಬಿಡಿ (ಯುಆರ್): 10 ವರ್ಷಗಳು
- ಪಿಡಬ್ಲ್ಯೂಬಿಡಿ (ಒಬಿಸಿ): 13 ವರ್ಷಗಳು
- ಪಿಡಬ್ಲ್ಯೂಬಿಡಿ (ಎಸ್‌ಸಿ/ಎಸ್‌ಟಿ): 15 ವರ್ಷಗಳು
ಅರ್ಜಿಶುಲ್ಕ :
- ಎಸ್‌ಸಿ/ಎಸ್‌ಟಿ/ಪಿಡಬ್ಲ್ಯೂಬಿಡಿ/ಮಹಿಳಾ: ಶುಲ್ಕವಿಲ್ಲ
- ಇತರರು: 25/- ರೂ ಅರ್ಜಿ ಶುಲ್ಕ
ಪಾವತಿ ವಿಧಾನ: ಆನ್‌ಲೈನ್ ಅಥವಾ ಎಸ್‌ಬಿಐ ಬ್ಯಾಂಕ್
ವೇತನ ಶ್ರೇಣಿ :
ಅಧಿಸೂಚನೆಯ ಪ್ರಕಾರ, ಮಾಸಿಕ ವೇತನ ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ :
ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ.
ಅರ್ಜಿಸಲ್ಲಿಸುವ ಕ್ರಮ :
1. ಅಧಿಕೃತ ವೆಬ್‌ಸೈಟ್ https://upsc.gov.in/ ಗೆ ಭೇಟಿ ನೀಡಿ.
2. ಸಹಾಯಕ ಪ್ರಾಧ್ಯಾಪಕ ಹುದ್ದೆಯ ಅಧಿಸೂಚನೆಯನ್ನು ಪರಿಶೀಲಿಸಿ.
3. ಅರ್ಜಿ ನಮೂನೆಯನ್ನು ಸರಿಯಾಗಿ ಭರ್ತಿ ಮಾಡಿ.
4. 27-03-2025 ರೊಳಗೆ ಅರ್ಜಿ ಸಲ್ಲಿಸಿ.
ಪ್ರಮುಖ ದಿನಾಂಕಗಳು :
- ಆನ್‌ಲೈನ್ ಅರ್ಜಿ ಪ್ರಾರಂಭ ದಿನಾಂಕ: 08-03-2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27-03-2025
- ಅರ್ಜಿಯನ್ನು ಮುದ್ರಿಸಲು ಕೊನೆಯ ದಿನಾಂಕ: 28-03-2025
ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ https://upsc.gov.in/ ಗೆ ಭೇಟಿ ನೀಡಿ.
Comments