Loading..!

ವಿಜಯಪುರ ಜಿಲ್ಲೆಯಲ್ಲಿ SSLC ಪಾಸಾದ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ l ಕೂಡಲೇ ಅರ್ಜಿ ಸಲ್ಲಿಸಿ

Tags: PUC SSLC
Published by: Bhagya R K
|
ವಿಜಯಪುರ ಜಿಲ್ಲೆಯಲ್ಲಿ SSLC ಪಾಸಾದ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ l ಕೂಡಲೇ ಅರ್ಜಿ ಸಲ್ಲಿಸಿ

ವಿಜಯಪುರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಬಸವನ ಬಾಗೇವಾಡಿ, ಮುದ್ದೇಬಿಹಾಳ, ಚಡಚಣ, ಇಂಡಿ, ಸಿಂದಗಿ, ಮತ್ತು ವಿಜಯಪುರ ಗ್ರಾಮಾಂತರ, ವಿಜಯಪುರ ನಗರದ ವ್ಯಾಪ್ತಿಯಲ್ಲಿ ಖಾಲಿ ಇರುವ 313 ಅಂಗನವಾಡಿ ಕಾರ್ಯಕರ್ತೆಯರು  ಹಾಗೂ 857 ಅಂಗನವಾಡಿ ಸಹಾಯಕಿಯರ ಹುದ್ದೆಗಳ ನೇಮಕಕ್ಕೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ

Job Overview
No. of posts
1170
Start Date
28 ಅಕ್ಟೋಬರ್ 2024
End Date
9 ನವೆಂಬರ್ 2024
Employment Type
FULL_TIME
Organization
KPSC Vaani (Website)
Location
ವಿಜಯಪುರ ಜಿಲ್ಲೆ, KA,
Selection Procedure:

ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆ ಖಾಲಿಯಿರುವ / ಹೊಸ ಕೇಂದ್ರ ಪ್ರಾರಂಭಿಸುತ್ತಿರುವ ಗ್ರಾಮದಲ್ಲಿ ವಾಸಿಸುತ್ತಿರುವ ಸಹಾಯಕಿಯರಿದ್ದು, ಅವರು ಎಸ್ ಎಸ್ ಎಲ್ ಸಿ ಉತ್ತೀರ್ಣರಾಗಿದ್ದು, ಕನಿಷ್ಠ 3 ವ‍ರ್ಷ ಸೇವೆ ಸಲ್ಲಿಸಿದ್ದು, 45 ವರ್ಷ ವಯೋಮಿತಿಯೊಳಗಿದ್ದು, ಆ ಅಂಗನವಾಡಿ ಕೇಂದ್ರದಿಂದ 3 ಕಿ.ಮೀ. ವ್ಯಾಪ್ತಿಯೊಳಗೆ ವಾಸಿಸುತ್ತಿದ್ದು, ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಿದ್ದಲ್ಲಿ ಆ ಅಂಗನವಾಡಿ ಕೇಂದ್ರಕ್ಕೆ ಕಾರ್ಯಕರ್ತೆ ಹುದ್ದೆಗೆ ಬೇರೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಪ್ರಮೇಯವಿರುವುದಿಲ್ಲ. ಸದರಿ ಸಹಾಯಕಿಯನ್ನೇ ಕಾರ್ಯಕರ್ತೆ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.
1. ಅರ್ಹ ವಿದ್ಯಾರ್ಹತೆ ಹೊಂದಿದ ಆಸಿಡ್ ದಾಳಿಗೆ ತುತ್ತಾದ ಮಹಿಳೆಯರು, ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಿದ್ದಲ್ಲಿ, ಇತರೆ ಎಲ್ಲಾ ಸ್ವೀಕೃತ ಅರ್ಜಿಗಳನ್ನು ತಿರಸ್ಕರಿಸಿ,ಆಸಿಡ್ ದಾಳಿಗೆ ತುತ್ತಾದ ಮಹಿಳೆಯರನ್ನು ಪ್ರಥಮ ಆದ್ಯತೆ ಮೇರೆಗೆ ಆಯ್ಕೆ ಮಾಡಿಕೊಳ್ಳಲಾಗುವುದು. 
2. ಇಲಾಖೆಯ ಸುಧಾರಣೆ ಸಂಸ್ಥೆಗಳಲ್ಲಿ ಆಶ್ರಯ ಪಡೆದ ಹಾಲಿ ಮತ್ತು ಮಾಜಿ ನಿವಾಸಿಗಳು ಅಂಗನವಾಡಿ ಕಾರ್ಯಕರ್ತೆ / ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಿದಾಗ ಆಸಿಡ್ ದಾಳಿಯ ಪ್ರಕರಣವನ್ನು ಹೊರತುಪಡಿಸಿ, ಉಳಿದ ಎಲ್ಲಾ ಸ್ವೀಕೃತ ಅರ್ಜಿಗಳನ್ನು ತಿರಸ್ಕರಿಸಿ, ಇಲಾಖಾ ಸುಧಾರಣಾ ಸಂಸ್ಥೆಗಳ ನಿವಾಸಿಗಳನ್ನು ಆಯ್ಕೆ ಮಾಡಲಾಗುವುದು.
3. ಅರ್ಹ ವಿದ್ಯಾರ್ಹತೆ ಹೊಂದಿದ ವಿಧವೆಯರು ಅರ್ಜಿ ಸಲ್ಲಿಸಿದಾಗ ಆಸಿಡ್ ದಾಳಿಗೆ ಒಳಗಾದ ಮಹಿಳೆ ಮತ್ತು ಇಲಾಖಾ ಸುಧಾರಣಾ ಸಂಸ್ಥೆಗಳ ನಿವಾಸಿಗಳನ್ನು ಹೊರತುಪಡಿಸಿ, ಉಳಿದ ಎಲ್ಲಾ ಸ್ವೀಕೃತ ಅರ್ಜಿಗಳನ್ನು ತಿರಸ್ಕರಿಸಿ, ವಿಧವೆಯರನ್ನೇ ಆಯ್ಕೆ ಮಾಡಲಾಗುವುದು. ವಿಧವೆಯರಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತನ ಪತ್ನಿಗೆ (ವಿಧವೆಗೆ) ಪ್ರಥಮ ಆದ್ಯತೆ ನೀಡಲಾಗುವುದು. 
4. ಅರ್ಹ ವಿದ್ಯಾರ್ಹತೆ ಹೊಂದಿದ ಶೇಕಡಾ 60% ಮೀರದಂತೆ ಅಂಗವಿಕಲತೆ ಹೊಂದಿದ ಮಹಿಳೆಯರು ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಿದಾಗ ಮೇಲೆ ವಿವರಿಸಿದ ಕ್ರಮ ಸಂಖ್ಯೆ:- 1,2 & 3 ರ ಪ್ರಕರಣಗಳನ್ನು ಹೊರತುಪಡಿಸಿದ, ಸ್ವೀಕೃತವಾಗಿರುವ ಎಲ್ಲಾ ಅರ್ಜಿಗಳನ್ನು ತಿರಸ್ಕರಿಸಿ, ಅಂಗವಿಕಲ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಅಂಗವಿಕಲ ಅಭ್ಯರ್ಥಿಗಳು ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸುವಂತಿಲ್ಲ. ಒಂದುವೇಳೆ ಅರ್ಜಿ ಸಲ್ಲಿಸಿದ್ದಲ್ಲಿ ತಿರಸ್ಕರಿಸಲಾಗುವುದು. 
5. ಮೇಲೆ ವಿವರಿಸಿದ ಕ್ರಮ ಸಂಖ್ಯೆ:- 1,2,3 & 4ರ ಪ್ರಕರಣಗಳನ್ನು ಹೊರತುಪಡಿಸಿ, ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ, ಇಲಾಖೆ ನಿಗಧಿಪಡಿಸಿದ ಮಾನದಂಡಗಳ ಪ್ರಕಾರ ಆಯ್ಕೆ ಮಾಡಲಾಗುವುದು.


ಅರ್ಹ ಮತ್ತು ಆಸಕ್ತರು ಕೊನೆಯ ದಿನಾಂಕ 09 ನವೆಂಬರ್ 2024 ರೊಳಗಾಗಿ ಆನ್‌ಲೈನ್‌ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ವಿವರ : 1170
ಅಂಗನವಾಡಿ ಕಾರ್ಯಕರ್ತೆ - 313
ಅಂಗನವಾಡಿ ಸಹಾಯಕಿ - 857

Qualification:

ಅಂಗನವಾಡಿ ಸಹಾಯಕಿ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿರಬೇಕು.
ಅಂಗನವಾಡಿ ಕಾರ್ಯಕರ್ತೆ : ಕನಿಷ್ಠ ಪಿಯುಸಿ ತೇರ್ಗಡೆ ಹೊಂದಿರಬೇಕು. ಎಸ್.ಎಸ್.ಎಲ್.ಸಿಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿರುವುದಿಲ್ಲ.

Age Limit:

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 19 ರಿಂದ ಗರಿಷ್ಠ 35 ವರ್ಷ ವಯೋಮಿತಿಯೊಳಗಿರಬೇಕು.

To Download Official Notification
Related Tags: PUC SSLC

Comments